ನನ್ನ ವಿರುದ್ಧ ಮಾತನಾಡಲು ಹೆಚ್‌ಡಿಕೆ RSSನಿಂದ ಗುತ್ತಿಗೆ ಪಡೆದಿದ್ದಾರೆಯೇ?: ಖರ್ಗೆ

ನನ್ನ ವಿರುದ್ಧ ಮಾತನಾಡಲು ಹೆಚ್‌ಡಿಕೆ RSSನಿಂದ ಗುತ್ತಿಗೆ ಪಡೆದಿದ್ದಾರೆಯೇ?: ಖರ್ಗೆ

ನನ್ನ ವಿರುದ್ಧ ಮಾತನಾಡಲು ಹೆಚ್‌ಡಿಕೆ RSSನಿಂದ ಗುತ್ತಿಗೆ ಪಡೆದಿದ್ದಾರೆಯೇ?: ಖರ್ಗೆ

ಬೆಂಗಳೂರು: ರಾಜ್ಯ ಸರ್ಕಾರವನ್ನು ಟೀಕೆ ಮಾಡಲು ಎಚ್‌.ಡಿ.ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಗುತ್ತಿಗೆ ಪಡೆದಿದ್ದಾರೆಯೇ? ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು ,‘ದಾಖಲೆಗಳಿಲ್ಲದೆ ಆರೋಪ ಮಾಡುವುದು ಕುಮಾರಸ್ವಾಮಿ ಅವರಿಗೆ ಅಭ್ಯಾಸವಾಗಿದೆ. ಮಾಜಿ ಮುಖ್ಯಮಂತ್ರಿಯಾಗಿ, ಪ್ರಸ್ತುತ ಕೇಂದ್ರ ಸಚಿವರಾಗಿ ಅವರು ಮಾತನಾಡುತ್ತಿಲ್ಲ. ಬದಲಾಗಿ ಆರ್‌ಎಸ್‌ಎಸ್‌ಗೆ ಸೇರ್ಪಡೆಯಾದ ರೀತಿಯಲ್ಲಿ ಮಾತನಾಡುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ‘ಕರ್ನಾಟಕ ಲೋಕಸೇವಾ ಆಯೋಗವೇ ಸ್ವತಃ 24 ಎಇಇ ಹುದ್ದೆಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ನೇಮಕಾತಿ ಮೇಲಿನ ಆರೋಪಗಳನ್ನು ತನಿಖೆ ಮಾಡಲು ಕೆಪಿಎಸ್‌ಸಿ ಮೊದಲಿಗೆ 3 ಸದಸ್ಯರ ಸಮಿತಿಯನ್ನು ರಚಿಸಿತ್ತು. ನಂತರದ ಪರಿಶೀಲನೆಗಾಗಿ 5 ಸದಸ್ಯರ ಸಮಿತಿಯನ್ನು ರಚಿಸಿದೆ. ಒಎಂಆರ್‌ ಶೀಟ್‌ಗಳ ಸುರಕ್ಷತೆ, ಪರೀಕ್ಷೆಯನ್ನು ಸೂಕ್ತ ರೀತಿಯಲ್ಲಿ ನಡೆಸುವುದು ಯಾರ ಜವಾಬ್ದಾರಿ? ಎಂದು ಪ್ರಶ್ನಿಸಿದ್ದಾರೆ.

ನೇಮಕಾತಿ ಕುರಿತು ಇಲಾಖೆ ಆದೇಶವು ಷರತ್ತುಬದ್ಧವಾಗಿತ್ತು. ಅದಾಗಿಯೂ, ಈ ವಿಚಾರದಲ್ಲಿ ನನ್ನ ಪಾತ್ರ ನೇರವಾಗಲಿ ಅಥವಾ ಪರೋಕ್ಷವಾಗಲಿ ಇದೆ ಎಂದು ಸಾಬೀತಾದರೆ, ನಾನು ರಾಜಕೀಯ ನಿವೃತ್ತಿ ಪಡೆಯಲು ಸಿದ್ಧನಿದ್ದೇನೆ’ ಎಂದು ಹೇಳಿದ್ದಾರೆ. 

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ