
ಈ ದಿನದ ಪ್ರಮುಖ 10 ಸುದ್ದಿಗಳು: ಬುಧವಾರ, 14 ಅಕ್ಟೋಬರ್ 2026
ಈ ದಿನದ ಪ್ರಮುಖ 10 ಸುದ್ದಿಗಳು: ಬುಧವಾರ, 14 ಅಕ್ಟೋಬರ್ 2026
ಜಂತರ್ ಮಂತರ್‌ಗೆ ಅಕ್ರಮ ಪ್ರವೇಶ: ಮುಂಜಾಗ್ರತಾ ಕ್ರಮವಾಗಿ ಸಿಜೆಪಿ ನಾಯಕರ ಬಂಧನ
ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂದೆ ಅವರನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಕ್ಟೋಬರ್ 13ರಂದು ಜಂತರ್ ಮಂತರ್‌ಗೆ ಅಕ್ರಮ ಪ್ರವೇಶ ಆರೋಪದ ಮೇಲೆ ಸಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಆಳ–ಅಗಲ: ಸ್ಟಾರ್‌ಲಿಂಕ್ ಭಾರತ ಪ್ರವೇಶ ವಿವಾದದ ಸುತ್ತ...
ಇಲಾನ್ ಮಸ್ಕ್ ತನ್ನ ಒಡೆತನದ ಸ್ಟಾರ್‌ಲಿಂಕ್ ಇಂಟರ್‌ನೆಟ್ ಸೇವೆ ಒದಗಿಸಲು ಭಾರತದಲ್ಲಿ ಅವಕಾಶ ಸಿಗದೇ ಇರುವುದರ ಸಂಬಂಧ ಆಡುತ್ತಿರುವ ಮಾತುಗಳು, ಮಾಡುತ್ತಿರುವ ಪ್ರತಿಪಾದನೆಗಳು ವಿವಾದ ಸೃಷ್ಟಿಸಿವೆ. ತಮಗೆ ಭಾರತದಲ್ಲಿ ಸೇವೆ ಒದಗಿಸಲು ಅವಕಾಶ ಸಿಗದೇ ಇರುವುದಕ್ಕೆ ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಕೇಶ್ ಅಂಬಾನಿ ಅವರೇ ಕಾರಣ ಎನ್ನುವ ಅವರ ಆರೋಪ ರಾಜಕೀಯ ಸ್ವರೂಪ ಪಡೆದಿದೆ. ಕೇಂದ್ರ ಸರ್ಕಾರದ ವಿರುದ್ಧ ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿರುವಾಗಲೇ ಉದ್ದೇಶಪೂರ್ವಕವಾಗಿ ಪ್ರಧಾನಿ ಮೋದಿ ಮತ್ತು ಉದ್ಯಮಿ ಮುಕೇಶ್ ಅಂಬಾನಿ ನಡುವಿನ ಸಂಬಂಧದ ವಿಚಾರವನ್ನು ಪ್ರಸ್ತಾಪಿಸಲಾಗಿದೆ ಎನ್ನುವ ವಿಶ್ಲೇಷಣೆ...
ಮಾರುವೇಷ ಕಾರ್ಯಾಚರಣೆ ವಿಡಿಯೊ|ನಾನು ನಿರಪರಾಧಿ; ಸತ್ಯವೇ ಗೆಲ್ಲಲಿದೆ: ಸಿದ್ದರಾಮಯ್ಯ
ಬೆಂಗಳೂರು: ‘ಮಾರುವೇಷದ ಕಾರ್ಯಾಚರಣೆಯ ವಿಡಿಯೊ ವಿಷಯದಲ್ಲಿ ನಾನು ಸಂಪೂರ್ಣ ನಿರಪರಾಧಿ. ಅಂತಿಮವಾಗಿ ಸತ್ಯವೇ ಗೆಲ್ಲುತ್ತದೆ’ ಎಂದು ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಷ್ಯಾ ಜೊತೆ ಡೀಸೆಲ್ ಒಪ್ಪಂದ ನಮಗಾಗಿ ಅಲ್ಲ, ಜಗತ್ತಿಗೆ: ಟ್ರಂಪ್ ಸಮರ್ಥನೆ
ವಾಷಿಂಗ್ಟನ್: ತೈಲ ಬೆಲೆ ಏರಿಕೆಯಿಂದ ಜಾಗತಿಕ ಮಾರುಕಟ್ಟೆ ತೊಂದರೆ ಅನುಭವಿಸುತ್ತಿದೆ, ಹೀಗಾಗಿ ಜಾಗತಿಕ ಮಾರುಕಟ್ಟೆಯನ್ನು ಸ್ಥಿರಗೊಳಿಸುವ ಉದ್ದೇಶದಿಂದ ರಷ್ಯಾದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ರಷ್ಯಾದೊಂದಿಗೆ ಮಾಡಿಕೊಂಡ ಡೀಸೆಲ್ ಒಪ್ಪಂದದ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಅವರು ಸಮಜಾಯುಷಿ ನೀಡಿದ್ದಾರೆ.
ಬಿಹಾರ ದೋಣಿ ದುರಂತ: 15 ವರ್ಷದೊಳಗಿನ 13 ಮಕ್ಕಳು ಸಾವು, ₹6 ಲಕ್ಷ ಪರಿಹಾರ ಘೋಷಣೆ
ಹಾಜಿಪುರ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಗಂಗಾ ನದಿಯಲ್ಲಿ ದೋಣಿ ಮಗುಚಿ ಬಿದ್ದು ಕನಿಷ್ಠ 13 ಮಂದಿ ಮೃತಪಟ್ಟಿದ್ದಾರೆ.
‘ದುರಂತಕ್ಕೀಡಾದ ದೋಣಿಯಲ್ಲಿ ಸುಮಾರು 20 ಮಂದಿ ಪ್ರಯಾಣಿಸುತ್ತಿದ್ದರು. ಮೃತಪಟ್ಟವರೆಲ್ಲರೂ 15 ವರ್ಷದೊಳಗಿನ ಮಕ್ಕಳು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈವರೆಗೆ ಏಳು ಮಕ್ಕಳನ್ನು ರಕ್ಷಿಸಲಾಗಿದ್ದು, ಪಾಟ್ನದ ಎನ್‌ಎಂಸಿಎಚ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ರಸ್ತೆ ತಡೆದು ರೈತರ ಆಕ್ರೋಶ
ಹುಬ್ಬಳ್ಳಿ: ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹5,500 ಬೆಂಬಲ ಬೆಲೆ ನಿಗದಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಮಂಗಳವಾರ ಕಿತ್ತೂರು ಕರ್ನಾಟಕ ಪ್ರದೇಶ ವ್ಯಾಪ್ತಿಯ ಆರು ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
8,000 ಜನರನ್ನು ಒಗ್ಗೂಡಿಸಿದರೆ ದೇಶದ ಧ್ವನಿಯಾಗಲು ಸಾಧ್ಯವಿಲ್ಲ: ರಾಹುಲ್‌ಗೆ ಶಾ
ನವದೆಹಲಿ: '2029ರ ಲೋಕಸಭಾ ಚುನಾವಣೆಯಲ್ಲೂ ಹೀನಾಯ ಸೋಲು ಅನುಭವಿಸಲು ರಾಹುಲ್ ಗಾಂಧಿ ಹಾಗೂ ವಿರೋಧ ಪಕ್ಷಗಳು ಸಿದ್ಧವಾಗಿರಬೇಕು' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಹಾಗೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ವಿಪಕ್ಷಗಳು ನಡೆಸುತ್ತಿರುವ ಪ್ರತಿಭಟನೆಯನ್ನು ತೀವ್ರವಾಗಿ ಖಂಡಿಸಿರುವ ಅಮಿತ್ ಶಾ, 'ದೇಶದ ಜನತೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇದ್ದಾರೆ' ಎಂದಿದ್ದಾರೆ.
ಕೆಪಿಎಸ್‌ಸಿ ಅಕ್ರಮ: ಅಲೋಕ್, ದಿವ್ಯಾ ಎಸ್‌ಐಟಿಯಿಂದ ಹೊರಕ್ಕೆ
ನವದೆಹಲಿ: ಕರ್ನಾಟಕ ಲೋಕಸೇವಾ ಆಯೋಗವು ಪಶು ವೈದ್ಯಾಧಿಕಾರಿಗಳು ಹಾಗೂ ಇತರೆ ಹುದ್ದೆಗಳಿಗೆ ನಡೆಸಿದ ನೇಮಕಾತಿ ಗಳಲ್ಲಿನ ಸಂಪೂರ್ಣ ಪಿತೂರಿ ಬಯಲಿಗೆಳೆದು ಆರೋಪಿಗಳನ್ನು ಪತ್ತೆ ಹಚ್ಚಲು ಹೈಕೋರ್ಟ್ ರಚಿಸಿರುವ ವಿಶೇಷ ತನಿಖಾ ತಂಡದಲ್ಲಿ (ಎಸ್‌ಐಟಿ) ಇಬ್ಬರು ಐಪಿಎಸ್ ಅಧಿಕಾರಿಗಳನ್ನು ಕೈಬಿಟ್ಟು ಮತ್ತಿಬ್ಬರನ್ನು ಸೇರಿಸಿಕೊಳ್ಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಯುಪಿಐ ಶುಲ್ಕ ಜಾರಿ ಮುಂದಕ್ಕೆ; ದೀಪಾವಳಿ ಹಬ್ಬದ ನಂತರ ಶುಲ್ಕ ಜಾರಿ ಸಾಧ್ಯತೆ
ನವದೆಹಲಿ: ಆಯ್ದ ಯುಪಿಐ ವಹಿವಾಟುಗಳಿಗೆ ಶೇಕಡ 0.4ರಷ್ಟು ಎಂಡಿಆರ್ ಶುಲ್ಕ ವಿಧಿಸುವ ತೀರ್ಮಾನವನ್ನು ರಾಷ್ಟ್ರೀಯ ಪಾವತಿ ನಿಗಮ (ಎನ್‌ಪಿಸಿಐ) ಮುಂದೂಡಿದೆ. ಶುಲ್ಕವು ಯಾವಾಗಿನಿಂದ ಜಾರಿಗೆ ಬರಲಿದೆ ಎಂಬುದನ್ನು ನಂತರದಲ್ಲಿ ತೀರ್ಮಾನಿಸಲಾಗುವುದು ಎಂದು ಅದು ಹೇಳಿದೆ.
ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿ ಯತ್ನ: ದೂರು ದಾಖಲು
ಕೋಲ್ಕತ್ತ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಲು ಯತ್ನಿಸಿದ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ.
ನಗರದ ಕಾಳಿಘಾಟ್ ಪ್ರದೇಶದಲ್ಲಿರುವ ತಮ್ಮ ನಿವಾಸದ ಸಮೀಪ ಮಂಗಳವಾರ ದುರ್ಗಾ ಪೂಜೆ ಕಾರ್ಯಕ್ರಮವನ್ನು ಉದ್ಘಾಟಿಸಲು ಮಮತಾ ಅವರು ತೆರಳುತ್ತಿದ್ದಾಗ ಘಟನೆ ನಡೆದಿದೆ.