ಕಲಬುರಗಿ| ಶಿಕ್ಷಣಕ್ಕೆ ಶೇ 10ರಷ್ಟು ಅನುದಾನ ಮೀಸಲಿಡಲಿ: ಎಸ್‌ಎಫ್‌ಐ

ಕಲಬುರಗಿ| ಶಿಕ್ಷಣಕ್ಕೆ ಶೇ 10ರಷ್ಟು ಅನುದಾನ ಮೀಸಲಿಡಲಿ: ಎಸ್‌ಎಫ್‌ಐ

ಕಲಬುರಗಿ| ಶಿಕ್ಷಣಕ್ಕೆ ಶೇ 10ರಷ್ಟು ಅನುದಾನ ಮೀಸಲಿಡಲಿ: ಎಸ್‌ಎಫ್‌ಐ

ಕಲಬುರಗಿ: ಭಾರತೀಯ ವಿದ್ಯಾರ್ಥಿ ಒಕ್ಕೂಟದ (ಎಸ್‌ಎಫ್‌ಐ) ಮೂರು ದಿನಗಳ 17ನೇ ರಾಜ್ಯ ಸಮ್ಮೇಳನಕ್ಕೆ ನಗರದಲ್ಲಿ ಶುಕ್ರವಾರ ಚಾಲನೆ ದೊರೆಯಿತು.

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಗತ್ ವೃತ್ತದ ತನಕ ಬೃಹತ್‌ ಮೆರವಣಿಗೆ ನಡೆಯಿತು. ಚೆಗುವೆರಾ, ಭಗತ್‌ ಸಿಂಗ್‌ ಚಿತ್ರವುಳ್ಳ ಕೆಂಪು ಬಾವುಟಗಳು, ‌‘ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಮಾಜವಾದ’ ಎಂದು ಬರೆದ ಶ್ವೇತ ಧ್ವಜಗಳು ರಾರಾಜಿಸಿದವು. ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಹೆಜ್ಜೆಹಾಕಿದರು.

ಜಗತ್ ವೃತ್ತದಲ್ಲಿ ನಡೆದ ಬಹಿರಂಗ ಸಭೆಯನ್ನು ಉದ್ಘಾಟಿಸಿದ ಎಸ್‌ಎಫ್‌ಐ ರಾಷ್ಟ್ರೀಯ ಅಧ್ಯಕ್ಷ ಆದರ್ಶ್‌ ಎಂ.ಸಾಜಿ, ‘ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಾವಧಿಯಲ್ಲಿ ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 1.20 ಲಕ್ಷ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗಿದೆ. 1.20 ಲಕ್ಷ ಸರ್ಕಾರಿ ಶಾಲೆಗಳು ಕೆಲಸ ಮಾಡುವಂಥ ಸುಸ್ಥಿತಿಯಲ್ಲಿ ಇಲ್ಲ. 2 ಲಕ್ಷದಷ್ಟು ಸರ್ಕಾರಿ ಶಾಲೆಗಳಿಗೆ ವಿದ್ಯುತ್ ಸಂಪರ್ಕವಿಲ್ಲ. 6 ಲಕ್ಷ ಸರ್ಕಾರಿ ಶಾಲೆಗಳಿಗೆ ಇಂಟರ್‌ನೆಟ್‌ ಸಂಪರ್ಕವಿಲ್ಲ. ಹೀಗಾಗಿ, ಕೇಂದ್ರ ಸರ್ಕಾರ ತನ್ನ ಬಜೆಟ್‌ನ ಶೇ10ರಷ್ಟು ಅನುದಾನವನ್ನು ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮೀಸಲಿಡಬೇಕು’ ಎಂದು ಆಗ್ರಹಿಸಿದರು.

‘ನರೇಂದ್ರ ಮೋದಿ ನೇತೃತ್ವದ 12 ವರ್ಷಗಳ ಆಡಳಿತಾವಧಿಯಲ್ಲಿ ಇಡೀ ಶಿಕ್ಷಣ ಕ್ಷೇತ್ರವು ಸಂಕಷ್ಟದಲ್ಲಿದೆ. ರಾಷ್ಟ್ರೀಯ ಶಿಕ್ಷಣ ನೀತಿ–2020ಕ್ಕೆ ಒಳಗೊಳ್ಳುವ ಗುಣವಿಲ್ಲ, ಅದು ಹೊರಗಿಡುವ ಗುಣ ಹೊಂದಿದೆ. ಬೋಧನಾ ಶುಲ್ಕವನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಮಕ್ಕಳ ಶಾಲಾ ಶುಲ್ಕ ಕಟ್ಟಲು ಮಹಾರಾಷ್ಟ್ರದಲ್ಲಿ 42 ವರ್ಷದ ತಾಯಿಯೊಬ್ಬರು ಓಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂಥ ಸ್ಥಿತಿ ಬಂದಿದೆ’ ಎಂದು ಟೀಕಿಸಿದರು.

‘ದೇಶವು ಅಘೋಷಿತ ತುರ್ತು ಪರಿಸ್ಥಿತಿಯ ಕಾಲಘಟ್ಟದಿಂದ ಕ್ರಮಿಸುತ್ತಿದೆ. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಒಂದೆಡೆ ದೇಶದ ಜಾತ್ಯತೀತ ತತ್ವಗಳನ್ನು ಧ್ವಂಸಗೊಳಿಸಿದೆ. ಮತ್ತೊಂದೆಡೆ, ಇತಿಹಾಸ ಮಾತ್ರವಲ್ಲದೆ ವಿಜ್ಞಾನವನ್ನೂ ತಿರುಚಿ ಬರೆಯಲು ಯತ್ನಿಸುತ್ತಿದೆ’ ಎಂದು ದೂರಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ