ಕೃಷ್ಣರಾಜಸಾಗರದಲ್ಲಿ ಅಕ್ಟೋಬರ್ 16ರಿಂದ 21ರವರೆಗೆ ಕಾವೇರಿ ಆರತಿ ಆಯೋಜನೆ

ಕೃಷ್ಣರಾಜಸಾಗರದಲ್ಲಿ ಅಕ್ಟೋಬರ್ 16ರಿಂದ 21ರವರೆಗೆ ಕಾವೇರಿ ಆರತಿ ಆಯೋಜನೆ

ಕೃಷ್ಣರಾಜಸಾಗರದಲ್ಲಿ ಅಕ್ಟೋಬರ್ 16ರಿಂದ 21ರವರೆಗೆ ಕಾವೇರಿ ಆರತಿ ಆಯೋಜನೆ

ಮಂಡ್ಯ: 2026ನೇ ಸಾಲಿನ ನಾಡ ಹಬ್ಬದ ಪ್ರಯುಕ್ತ ಕೃಷ್ಣರಾಜಸಾಗರ ಬೃಂದಾವನ ಉದ್ಯಾನದಲ್ಲಿ ಕಾವೇರಿ ಆರತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಕ್ಟೋಬರ್ 16ರಿಂದ 21ರವರೆಗೆ ನಿತ್ಯ ಸಂಜೆ 6 ಗಂಟೆಗೆ ಆಯೋಜಿಸಲಾಗಿದೆ.

ಜಲಸಂಪನ್ಮೂಲ ಇಲಾಖೆ, ಕಾವೇರಿ ನೀರಾವರಿ ನಿಗಮ ಹಾಗೂ ಜಿಲ್ಲಾಡಳಿತ ವತಿಯಿಂದ ನಡೆಯುವ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ನಿರ್ಮಾಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಕೆಂಗೇರಿ ಒಕ್ಕಲಿಗರ ಮಹಾ ಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ, ಉರಿಲಿಂಗಪೆದ್ದೇಶ್ವರ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಕನಕ ಗುರು ಪೀಠದ ಶಿವಾನಂದಾಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.

ಅ.16ರಂದು ಸಂಜೆ 6 ಗಂಟೆಗೆ ಕಾವೇರಿ ಆರತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ, ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹಾಗೂ ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ, ಮುಜರಾಯಿ ಸಚಿವ ಕೆ ಎಸ್. ಬಸವಂತಪ್ಪ ಪಾಲ್ಗೊಳ್ಳಲಿದ್ದಾರೆ.

ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷ ಡಾ.ಮೂರ್ತಿ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಉಪಸ್ಥಿತರಿರುವರು.

ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ

ಅಕ್ಟೋಬರ್ 16 ರಿಂದ 21ರವರೆಗೆ ಸಂಜೆ 7 ಗಂಟೆಗೆ ಕೃಷ್ಣರಾಜಸಾಗರ ಬೃಂದಾವನ ಉದ್ಯಾನದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ (ಸಂಗೀತ ರಸಸಂಜೆ) ವಿವರ

ಅ.16: ನವೀನ ಸಜ್ಜು ಮತ್ತು ತಂಡ

ಅ.17: ದಿವ್ಯಾ ರಾಮಚಂದ್ರ ಮತ್ತು ತಂಡ

ಅ.18: ಆಲ್ ಓಕೆ ಮತ್ತು ತಂಡ

ಅ.19: ಭಾಗ್ಯಶ್ರೀ ಗೌಡ ಮತ್ತು ತಂಡ

ಅ.20: ಕಿಕ್ಕೇರಿ ಕೃಷ್ಣಮೂರ್ತಿ ಮತ್ತು ತಂಡ

ಅ.21: ಕಂಬದ ರಂಗಯ್ಯ ಮತ್ತು ತಂಡ

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ