ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಚಿತ್ರದುರ್ಗ: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಆರೋಪ ಸಾಬೀತಾಗಿರುವ ಕಾರಣ ಅಪರಾಧಿಗೆ 20 ವರ್ಷ ಜೈಲುಶಿಕ್ಷೆ ವಿಧಿಸಿ ಜಿಲ್ಲಾ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್‌ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.

2024ರಲ್ಲಿ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದ ಅಪರಾಧಿ ಅತ್ಯಾಚಾರ ಎಸಗಿದ್ದ. ಈ ಸಂಬಂಧ ಹೊಳಲ್ಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್‌ ಎಂ.ಬಿ.ಚಿಕ್ಕಣ್ಣವರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಆರೋಪ ಸಾಬೀತಾದ ಕಾರಣ ನ್ಯಾಯಾಧೀಶರಾದ ಚನ್ನಬಸಪ್ಪ ಹಡಪದ ಅವರು 20 ವರ್ಷ ಜೈಲು ಶಿಕ್ಷೆ, ₹ 10,000 ದಂಡದ ಜೊತೆಗೆ ಬಾಲಕಿಗೆ ₹ 4 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಎಚ್‌.ಆರ್‌.ಜಗದೀಶ್‌ ವಾದ ಮಂಡನೆ ಮಾಡಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ