ಮದ್ಯ ಮಾರಾಟ: ₹22,191 ಕೋಟಿ ರಾಜಸ್ವ ಸಂಗ್ರಹ

ಮದ್ಯ ಮಾರಾಟ: ₹22,191 ಕೋಟಿ ರಾಜಸ್ವ ಸಂಗ್ರಹ

ಮದ್ಯ ಮಾರಾಟ: ₹22,191 ಕೋಟಿ ರಾಜಸ್ವ ಸಂಗ್ರಹ

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್‌ನಿಂದ ಸೆಪ್ಟೆಂಬರ್‌ ಅವಧಿಯ ಆರು ತಿಂಗಳಲ್ಲಿ ಮದ್ಯ ಮಾರಾಟದಲ್ಲಿ ₹22,191 ಕೋಟಿ ವರಮಾನ ಸಂಗ್ರಹವಾಗಿದ್ದು,ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಶೇ 13.39 ಕೋಟಿ ಹೆಚ್ಚು ಸಂಗ್ರಹವಾಗಿದೆ.

ಭಾರತೀಯ ತಯಾರಿಕಾ ಮದ್ಯ (ಐಎಂಎಲ್‌) ಮಾರಾಟದಿಂದ ₹17,424.57 ಕೋಟಿ (ಶೇ 13.32), ಬಿಯರ್ ಮಾರಾಟದಿಂದ ₹3,377 ಕೋಟಿ (ಶೇ19.08) ಆದಾಯ ಬಂದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಐಎಂಎಲ್‌ನಿಂದ ₹15,376 ಕೋಟಿ, ಬಿಯರ್‌ನಿಂದ ₹2,836 ಕೋಟಿ ರಾಜಸ್ವ ಸಂಗ್ರಹವಾಗಿತ್ತು ಎಂದು ಅಬಕಾರಿ ಇಲಾಖೆ ಪ್ರಕಟಣೆ ತಿಳಿಸಿದೆ.

ಐಎಂಎಲ್‌ ಮದ್ಯ 346.33 ಲಕ್ಷ ಬಾಕ್ಸ್‌ಗಳು ಮಾರಾಟವಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 342.93 ಲಕ್ಷ ಬಾಕ್ಸ್‌ಗಳು ಮಾರಾಟವಾಗಿದ್ದವು. 3.90 ಲಕ್ಷ ಹೆಚ್ಚುವರಿ ಬಾಕ್ಸ್‌ಗಳು ಮಾರಾಟವಾಗಿದ್ದು, ಶೇ 1.14ರಷ್ಟು ಬೆಳವಣಿಗೆಯಾಗಿದೆ. ಬಿಯರ್‌ ಆರು ತಿಂಗಳಲ್ಲಿ 275.96 ಲಕ್ಷ ಬಾಕ್ಸ್‌ಗಳು ಮಾರಾಟವಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 195.27 ಲಕ್ಷ ಬಾಕ್ಸ್‌ ಮಾರಾಟವಾಗಿದ್ದವು. ಶೇ 41.32ರಷ್ಟು ಬೆಳವಣಿಗೆಯಾಗಿದೆ ಎಂದು ವಿವರಿಸಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ