
ಹಾವೇರಿ: ಅ. 4ರಂದು ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಹಾವೇರಿ: ಇಲ್ಲಿಯ ವಿನಾಯಕನಗರದಲ್ಲಿರುವ ಜಿಲ್ಲಾ ಸಾಹಿತ್ಯ ಭವನದಲ್ಲಿ ಅ. 4ರಂದು ಗಂಗಾಮತ ಸಮಾಜದ ನೌಕರರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಲಿದೆ.
ಬೆಳಿಗ್ಗೆ 10.30 ಗಂಟೆಗೆ ಆರಂಭವಾಗುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಉದ್ಘಾಟಿಸಲಿದ್ದಾರೆ. ನರಸೀಪುರದ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.
ಗಂಗಾಮತ ಸಮಾಜ ನೌಕರರ ಸಂಘದ ಅಧ್ಯಕ್ಷ ಎಚ್.ಎಂ. ದಂಡಿನ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಗಂಗಾಮತ ಸಮಾಜ ನೌಕರರ ಸಂಘದ ರಾಜ್ಯ ಅಧ್ಯಕ್ಷ ಶ್ರೀನಿವಾಸ್, ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಬಸವರಾಜ ಶಿವಣ್ಣನವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಭುಗೌಡ್ರ ಬಿಷ್ಟನಗೌಡ್ರ, ಸುರೇಶ ಹುಳಬುತ್ತಿ, ಸಂಜೀವಕುಮಾರ ನೀರಲಗಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.