
ದಾವಣಗೆರೆ| ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿ-ಕಾರು ಡಿಕ್ಕಿ: ವ್ಯಕ್ತಿ ಸಾವು
ದಾವಣಗೆರೆ: ನಗರದ ಹೊರವಲಯದ ಬಾಡಾ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಿಎನ್ಜಿ ತುಂಬಿದ ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರ ಗುರುತು ಪತ್ತೆಯಾಗಿಲ್ಲ. ಕಾರು ಬೆಂಗಳೂರಿನ ಬೃಂದಾವನ ಕನ್ಸ್ಟ್ರಕ್ಷನ್ ಹೆಸರಿನಲ್ಲಿ ನೋಂದಣಿಯಾಗಿದೆ ದಕ್ಷಿಣ ಸಂಚಾರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಂದ ದಾವಣಗೆರೆ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರಿನಿಂದ ಶವ ಹೊರತೆಗೆದಿದ್ದಾರೆ.