ಈಶಾನ್ಯ ಶಿಕ್ಷಕರ ಕ್ಷೇತ್ರ | ಸಂಜೆ 4ರೊಳಗೆ ಮತ ಚಲಾಯಿಸಿ: ರಾಯಚೂರು ಜಿಲ್ಲಾಧಿಕಾರಿ

ಈಶಾನ್ಯ ಶಿಕ್ಷಕರ ಕ್ಷೇತ್ರ | ಸಂಜೆ 4ರೊಳಗೆ ಮತ ಚಲಾಯಿಸಿ: ರಾಯಚೂರು ಜಿಲ್ಲಾಧಿಕಾರಿ

ಈಶಾನ್ಯ ಶಿಕ್ಷಕರ ಕ್ಷೇತ್ರ | ಸಂಜೆ 4ರೊಳಗೆ ಮತ ಚಲಾಯಿಸಿ: ರಾಯಚೂರು ಜಿಲ್ಲಾಧಿಕಾರಿ

ರಾಯಚೂರು: ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ಸಂಜೆ 4 ಗಂಟೆಯೊಳಗೆ ಮತಗಟ್ಟೆಗಳಿಗೆ ತೆರಳಿ ತಮ್ಮ ಮತ ಚಲಾಯಿಸಬೇಕು ಎಂದು ಸಹಾಯಕ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪೂವಿತಾ ಎಸ್. ಮನವಿ ಮಾಡಿದರು.

ನಗರದ ಶ್ರೀ ಶಾರದಾ ಕನ್ಯಾಪೀಠ ಮಾಧ್ಯಮಿಕ ಪಾಠಶಾಲೆಯ ಮತಗಟ್ಟೆಗೆ ಶುಕ್ರವಾರ ಭೇಟಿ ನೀಡಿ, ಮತದಾನ ಪ್ರಕ್ರಿಯೆ ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಚುನಾವಣೆಯ ಮತದಾನ ಪ್ರಕ್ರಿಯೆಯು ನಿಗದಿಯಂತೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದೆ. ಎಲ್ಲ ಮತಗಟ್ಟೆಗಳಲ್ಲೂ ಪೋಲಿಂಗ್ ಪಾರ್ಟಿಗಳು ಹಾಗೂ ಸೂಕ್ಷ್ಮ ವೀಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದು, ಶಾಂತಿಯುತವಾಗಿ ಮತದಾನ ನಡೆಯುತ್ತಿದೆ ಎಂದು ತಿಳಿಸಿದರು.

ಮತದಾನ ಪ್ರಕ್ರಿಯೆಯು ಸಂಜೆ 4 ಗಂಟೆಗೆ ಮುಕ್ತಾಯಗೊಳ್ಳಲಿದ್ದು, ನಿಗದಿತ ಸಮಯದ ನಂತರ ಮತದಾನಕ್ಕೆ ಅವಕಾಶವಿರುವುದಿಲ್ಲ. ಆದ್ದರಿಂದ ಮತದಾರರು ಕೊನೆಯ ಕ್ಷಣದವರೆಗೆ ಕಾಯದೆ, ಸಮಯಕ್ಕೆ ಮುಂಚಿತವಾಗಿಯೇ ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.

ಚುನಾವಣೆಯ ಸಿದ್ಧತೆಗಳ ಕುರಿತು ಈಗಾಗಲೇ ಪರಿಶೀಲನೆ ನಡೆಸಲಾಗಿದೆ. ಹಿಂದಿನ ದಿನ ದೇವದುರ್ಗಕ್ಕೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಲಾಗಿದ್ದು, ಆಯಾ ವಿಭಾಗದ ಸಹಾಯಕ ಆಯುಕ್ತರು ಚುನಾವಣಾ ಕಾರ್ಯಗಳ ಮೇಲೆ ನಿಗಾ ವಹಿಸಿದ್ದಾರೆ ಎಂದರು.

ಜಿಲ್ಲೆಯ 16 ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಮತದಾನ ಪ್ರಕ್ರಿಯೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಪ್ರತಿ ಮತಗಟ್ಟೆಯಲ್ಲೂ ನಾಲ್ವರು ಸಿಬ್ಬಂದಿಯನ್ನೊಳಗೊಂಡ ಮತಗಟ್ಟೆ ತಂಡ ಹಾಗೂ ಸೂಕ್ಷ್ಮ ವೀಕ್ಷಕರನ್ನು ನಿಯೋಜಿಸಲಾಗಿದೆ. ಸ್ಟೇಷನ್ ರಸ್ತೆ ಮತ್ತು ಸಿಂಧನೂರಿನ ಹೆಚ್ಚಿನ ಮತದಾರರಿರುವ ಮತಗಟ್ಟೆಗಳಲ್ಲಿ ಜನಸಂದಣಿ ಹಾಗೂ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಹೆಚ್ಚುವರಿ ಮೀಸಲು ತಂಡಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ರಾಯಚೂರು ಸಿಪಿಐ ಉಮೇಶ್ ಕಾಂಬಳೆ ಸೇರಿದಂತೆ ಚುನಾವಣಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ