ಮೂಲಸೌಕರ್ಯಕ್ಕೆ ಆಗ್ರಹ: ತೆಂಗಳಿ ಗ್ರಾ.ಪಂ.ಗೆ ಬೀಗ, 5ನೇ ದಿನವೂ ತಣಿಯದ ಆಕ್ರೋಶ

ಮೂಲಸೌಕರ್ಯಕ್ಕೆ ಆಗ್ರಹ: ತೆಂಗಳಿ ಗ್ರಾ.ಪಂ.ಗೆ ಬೀಗ, 5ನೇ ದಿನವೂ ತಣಿಯದ ಆಕ್ರೋಶ

ಮೂಲಸೌಕರ್ಯಕ್ಕೆ ಆಗ್ರಹ: ತೆಂಗಳಿ ಗ್ರಾ.ಪಂ.ಗೆ ಬೀಗ, 5ನೇ ದಿನವೂ ತಣಿಯದ ಆಕ್ರೋಶ

ಕಾಳಗಿ (ಕಲಬುರಗಿ ‌ಜಿಲ್ಲೆ): ತಾಲ್ಲೂಕಿನ ತೆಂಗಳಿ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ಶೌಚಾಲಯ ಸಮಸ್ಯೆಯಿಂದ ಬೇಸತ್ತ ವಾರ್ಡ್ ನಂ.3ರ ನಿವಾಸಿಗಳು ಅಕ್ಟೋಬರ್ 2ರಂದು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿರುವುದು 5ನೇ ದಿನವಾದ ಮಂಗಳವಾರವು ಮುಂದುವರಿದಿದೆ.

ಕಳೆದ ಮೂರು ತಿಂಗಳಿಂದ ಹಳ್ಳದ ನೀರನ್ನು ಕುಡಿಯುವ ಸ್ಥಿತಿ ನಿರ್ಮಾಣವಾಗಿದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುವ ವಾರ್ಡ್‌ ನಿವಾಸಿಗಳು, ಕೂಡಲೇ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ವಾರ್ಡ್ ನಂ. 03 ಸಂಪೂರ್ಣವಾಗಿ ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಕಳೆದ ಮೂರು ತಿಂಗಳಿಂದ ಈ ಭಾಗದಲ್ಲಿ ಕುಡಿಯುವ ನೀರಿನ ಅಭಾವ ತೀವ್ರವಾಗಿದ್ದು, ಜನರು ಅನಿವಾರ್ಯವಾಗಿ ಹಳ್ಳದ ನೀರನ್ನೇ ಬಳಸುತ್ತಿದ್ದಾರೆ. ಇದರ ಜತೆಗೆ ಮಹಿಳಾ ಶೌಚಾಲಯದ ಸಮಸ್ಯೆಯೂ ತೀವ್ರವಾಗಿದ್ದು, ಮಹಿಳೆಯರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳನ್ನು ಪ್ರಶ್ನಿಸಿದರೆ 'ನೀರಿನ ಸಮಸ್ಯೆಗೆ ಪಂಚಾಯಿತಿ ಕಾರಣವಲ್ಲ, ಜೆಸ್ಕಾಂನ ಟ್ರಾನ್ಸ್‌ಫಾರ್ಮರ್ (ಟಿಸಿ) ಸುಟ್ಟು ಹೋಗಿರುವುದೇ ಕಾರಣ' ಎಂದು ಸಬೂಬು ನೀಡುತ್ತಿದ್ದಾರೆ. ಆದರೆ ಜೆಸ್ಕಾಂ ಅಧಿಕಾರಿಗಳು ಕಳುಹಿಸಿಕೊಟ್ಟಿದ್ದ ಟಿಸಿ ತೀರ ಕಳಪೆ ಮಟ್ಟದಿಂದ ಕೂಡಿದ್ದು ಅದನ್ನು ಚಾಲೂ ಮಾಡುವ ಹಂತದಲ್ಲೇ ಮರಳಿ ಸುಟ್ಟು ಹೋಗಿದೆ ಎಂದು ಜನರು ಆರೋಪಿಸಿದರು.

ಅಧಿಕಾರಿಗಳ ಈ ನಿರ್ಲಕ್ಷ್ಯ ಧೋರಣೆಗೆ ಸಾರ್ವಜನಿಕರು ಸಾಲು ಸಾಲು ಪ್ರಶ್ನೆಗಳನ್ನು ಎತ್ತಿದ್ದಾರೆ.

ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರು ಮತ್ತು ನೈರ್ಮಲ್ಯದಂತಹ ಕನಿಷ್ಠ ಸೌಕರ್ಯ ಕಲ್ಪಿಸಿಕೊಡುವಲ್ಲಿ ಅಧಿಕಾರಿಗಳ ಉದಾಸೀನತೆ ಎದ್ದು ಕಾಣುತ್ತಿದೆ. ಕಳಪೆ ಟಿಸಿ ಪೂರೈಸಿದ ಜೆಸ್ಕಾಂ ಹಾಗೂ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿರುವ ಪಂಚಾಯಿತಿ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆಶ್ಚರ್ಯವೆಂದರೆ ಪಂಚಾಯಿತಿ ಕಚೇರಿಗೆ ಬೀಗ ಜಡಿದು 5 ದಿನಗಳಾದರೂ ಇಲ್ಲಿವರೆಗೂ ಸಂಬಂಧಪಟ್ಟ ಯಾವೊಬ್ಬ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ