ಮುಂಡರಗಿ: ₹59,400 ಮೌಲ್ಯದ ಪಡಿತರ ಅಕ್ಕಿ ವಶ

ಮುಂಡರಗಿ: ₹59,400 ಮೌಲ್ಯದ ಪಡಿತರ ಅಕ್ಕಿ ವಶ

ಮುಂಡರಗಿ: ₹59,400 ಮೌಲ್ಯದ ಪಡಿತರ ಅಕ್ಕಿ ವಶ

ಮುಂಡರಗಿ: ಅನ್ನಭಾಗ್ಯ ಯೋಜನೆಯ ಅಡಿ ವಿತರಿಸುವ ಪಡಿತರ ಅಕ್ಕಿಮೂಟೆಗಳು ಪಟ್ಟಣದ ಜಗದ್ಗುರು ತೋಂಟದಾರ್ಯ ಕೋಟೆ ಪ್ರೌಢಶಾಲೆಯ ಬಳಿ ಗುರುವಾರ ಸಂಜೆ ಪತ್ತೆಯಾಗಿದ್ದು, ಪೊಲೀಸರು ಅಕ್ಕಿಮೂಟೆಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಒಟ್ಟು ₹ 59,400 ಮೌಲ್ಯದ ತಲಾ 50 ಕೆ.ಜಿಯ ಒಟ್ಟು 24 ಅಕ್ಕಿ ಮೂಟೆಗಳು ಪತ್ತೆಯಾಗಿದ್ದು, ಅವುಗಳನ್ನು ಯಾರು ಸಂಗ್ರಹಿಸಿದ್ದಾರೆ, ಪಟ್ಟಣದ ಹೊರವಲಯದಲ್ಲಿ ಏಕೆ ಇಟ್ಟಿದ್ದಾರೆ ಎನ್ನುವುದು ನಿಗೂಢವಾಗಿದೆ. ಕನ್ನಡ ಜಾಗೃತಿ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಗಣೇಶ ಹಾತಲಗೇರಿ ಅವರು ಮೊದಲು ತಾಲ್ಲೂಕು ಆಹಾರ ನಿರೀಕ್ಷಕ ಚನ್ನಪ್ಪ ಚನ್ನಪ್ಪಗೌಡರ ಅವರ ಗಮನಕ್ಕೆ ತಂದಿದ್ದಾರೆ. ನಂತರ ಪೊಲೀಸರೊಂದಿಗೆ ಸ್ಥಳಕ್ಕೆ ಬಂದ ಆಹಾರ ನಿರೀಕ್ಷಕರು ಅಕ್ಕಿಮೂಟೆಗಳನ್ನು ಪರಿಶೀಲಿಸಿ, ಅಕ್ಕಿಯು ಅನ್ನಭಾಗ್ಯ ಯೋಜನೆಯ ಪಡಿತರ ವಿತರಣೆಯ ಅಕ್ಕಿ ಎಂದು ಖಚಿತಪಡಿಸಿದ್ದಾರೆ. ನಂತರ ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ