ನ. 5ರಂದು ಮತಗಳ್ಳತನ ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ: ಹರಿಪ್ರಸಾದ್‌

ನ. 5ರಂದು ಮತಗಳ್ಳತನ ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ: ಹರಿಪ್ರಸಾದ್‌

ನ. 5ರಂದು ಮತಗಳ್ಳತನ ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ: ಹರಿಪ್ರಸಾದ್‌

ಬೆಂಗಳೂರು: ‘ಮತಗಳ್ಳತನದ ವಿರುದ್ಧ ನ. 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿಯಿಂದ ಬೃಹತ್‌ ಪ್ರತಿಭಟನೆ ನಡೆಯಲಿದ್ದು, ಅದರಲ್ಲಿ ರಾಜ್ಯದಿಂದ ಸಾವಿರಾರು ಮಂದಿ ಪಾಲ್ಗೊಳ್ಳಲಿದ್ದಾರೆ. ಮುಂದುವರಿದ ಭಾಗವಾಗಿ ನ.5 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ತಿಳಿಸಿದರು.

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಹರಿಪ್ರಸಾದ್‌, ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ನಡೆಯಲಿದೆ. ಮತಗಳ್ಳತನ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆ ಆಗ್ರಹಿಸಿ ಪ್ರತಿಭಟನೆ ಮಾಡಲಾಗುವುದು’ ಎಂದರು.

‘ದೆಹಲಿ ಪ್ರತಿಭಟನೆಯಲ್ಲಿ ರಾಜ್ಯದ ಸಾವಿರಾರು ಮಂದಿ ಭಾಗಿಯಾಗುವಂತೆ ವ್ಯವಸ್ಥೆ ಮಾಡಲಾಗುವುದು. ನ. 1 ರಂದು ಕನ್ನಡ ರಾಜ್ಯೋತ್ಸವ ಇರುವ ಕಾರಣದಿಂದ ಸಚಿವರು ಜಿಲ್ಲೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರನ್ನು ಹೊರತುಪಡಿಸಿ ಜಿಲ್ಲಾ ಘಟಕಗಳ ಅಧ್ಯಕ್ಷರು, ಬ್ಲಾಕ್‌ ಅಧ್ಯಕ್ಷರು ದೆಹಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ’ ಎಂದರು.

‘ಎಐಸಿಸಿ ನಿರ್ದೇಶನದಂತೆ ನ.5 ರಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು. ದೇಶ ರಕ್ಷಣೆ-ಮತ ರಕ್ಷಣೆ ಹೆಸರಿನಲ್ಲಿ ನಮ್ಮ ಹೋರಾಟ ನಡೆಯಲಿದೆ. ಮುಂದಿನ ಎರಡು ತಿಂಗಳ ಕಾರ್ಯಕ್ರಮ ರೂಪಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಮಹಾತ್ಮ ಗಾಂಧಿ ಅಥವಾ ಅಂಬೇಡ್ಕರ್‌ ಅವರ ಪ್ರತಿಮೆಯಿಂದ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮತಗಳ್ಳತನ ವಿರುದ್ಧ ದೂರು ನೀಡಲಾಗುವುದು’ ಎಂದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ