
ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್, BJP ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಅಖಾಡ ರಂಗೇರಿದೆ.
ಬಿಜೆಪಿ ಅಭ್ಯರ್ಥಿಯೂ ಆಗಿರುವ ವಿಧಾನ ಪರಿಷತ್ ಹಾಲಿ ಸದಸ್ಯ ಶಶೀಲ್ ನಮೋಶಿ ಸೋಮವಾರ ಪಕ್ಷದ ನಾಯಕರೊಂದಿಗೆ ಬಂದು ಅಧಿಕೃತವಾಗಿ ಉಮೇದುವಾರಿಕೆ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಶಾಸಕ ಬಸವರಾಜ ಮತ್ತಿಮಡು, ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ ಸೇರಿದಂತೆ ಹಲವರು ಸಾಥ್ ನೀಡಿದ್ದರು.
ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರು ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೆದಾರ ಸೇರಿದಂತೆ ಹಲವರು ಸಾಥ್ ನೀಡಿದ್ದರು.
ಇಬ್ಬರೂ ಅಭ್ಯರ್ಥಿಗಳ ನೂರಾರು ಬೆಂಬಲಿಗರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನೆರೆದಿದ್ದರು.