
ಮಂಗಳೂರು–ಮಡಗಾಂವ್ ವಂದೇ ಭಾರತ್ ಬೆಂಗಳೂರಿಗೆ ವಿಸ್ತರಣೆ: ಬಿ.ವೈ. ರಾಘವೇಂದ್ರ
ಬೈಂದೂರು: ಮಂಗಳೂರು–ಮಡಗಾಂವ್ ವಂದೇ ಭಾರತ್ ರೈಲನ್ನು ಮೂಕಾಂಬಿಕಾ ರೋಡ್–ಬೈಂದೂರು ನಿಲ್ದಾಣದ ಮೂಲಕ ಬೆಂಗಳೂರು (ಯಶವಂತಪುರ) ವರೆಗೆ ವಿಸ್ತರಿಸಲಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ಕುರಿತು ಮಾಹಿತಿ ನೀಡಿದ್ದಾರೆ ಎಂದು ಹೇಳಿರುವ ಸಂಸದ ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ ಎಂದಿದ್ದಾರೆ.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳುವವರಿಗೆ ಮೂಕಾಂಬಿಕಾ ರೋಡ್–ಬೈಂದೂರಿನಲ್ಲಿ ನಿಲುಗಡೆ ಕಲ್ಪಿಸಿರುವುದು ಖುಷಿಯ ವಿಷಯ. ಇದರಿಂದ ಭಕ್ತರು, ಪ್ರವಾಸಿಗರಿಗೆ ಮಾತ್ರವಲ್ಲ, ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿದಂತೆ ಎಲ್ಲ ಪ್ರಯಾಣಿಕರಿಗೂ ಅನುಕೂಲ ಆಗಲಿದೆ ಎಂದು ಸಂಸದರು ಹೇಳಿದ್ದಾರೆ.