ತಂತ್ರಜ್ಞಾನ ದುರ್ಬಳಕೆ ಆಗದಂತೆ ಮಕ್ಕಳ ಮೇಲೆ ಪೋಷಕರು ನಿಗಾವಹಿಸಿ: ನ್ಯಾ. ಮಹಾದೇವ

ತಂತ್ರಜ್ಞಾನ ದುರ್ಬಳಕೆ ಆಗದಂತೆ ಮಕ್ಕಳ ಮೇಲೆ ಪೋಷಕರು ನಿಗಾವಹಿಸಿ: ನ್ಯಾ. ಮಹಾದೇವ

ತಂತ್ರಜ್ಞಾನ ದುರ್ಬಳಕೆ ಆಗದಂತೆ ಮಕ್ಕಳ ಮೇಲೆ ಪೋಷಕರು ನಿಗಾವಹಿಸಿ: ನ್ಯಾ. ಮಹಾದೇವ

ಗೋಕಾಕ: ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಪೋಷಕರು ಮತ್ತು ಪಾಲಕರು ತಂತ್ರಜ್ಞಾನದ ದುರ್ಬಳಕೆ ಆಗದಂತೆ ಮಕ್ಕಳ ಮೇಲೆ ನಿಗಾವಹಿಸುವುದು ಇಂದಿನ ಅಗತ್ಯವಾಗಿದೆ ಎಂದು ಇಲ್ಲಿನ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧೀಶ ಮಹಾದೇವ ಕಾನಟ್ಟಿ ಹೇಳಿದರು.

ಮಂಗಳವಾರ ಇಲ್ಲಿನ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಸಭಾಂಗಣದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ, ಸಿ.ಡಿ.ಪಿ.ಒ., ಪೊಲೀಸ್ ಇಲಾಖೆ ಮತ್ತು ತಾಲ್ಲೂಕು ಆರೋಗ್ಯ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣೆ ಕಾಯ್ದೆ-2012’ ಕುರಿತು ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿತ ಕಾನೂನು ಸಾಕ್ಷರತಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಶಿಬಿರಾರ್ಥಿಗಳಿಗೆ ಸಮಿತಿಯ ಪ್ಯಾನಲ್‌ ವಕೀಲೆ ಜಯಶ್ರೀ ಮಾದರ, ಗೋಕಾಕ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಜೋತಿರಲಕ್ಷ್ಮೀ ಅಂಗಡಿ ಹಾಗೂ ಗೋಕಾಕ ಶಹರ ಪೊಲೀಸ್‌ ಠಾಣೆಯ ಚಂದ್ರಕಲಾ ನಾಯಿಕವಾಡಿ ಅವರು ಉಪನ್ಯಾಸ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪಿಯು ಕಾಲೇಜಿನ ಪ್ರಾಚಾರ್ಯೆ ಅನ್ನಪೂರ್ಣ ಕುರಬೇಟ ಅವರು ಮಾತನಾಡಿದರು. ಗೋಕಾಕ ವಕೀಲರ ಸಂಘದ ಸಹ-ಕಾರ್ಯದರ್ಶಿ ಎಸ್.ಬಿ.ವಡ್ರಟ್ಟಿ, ಇದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ