‘ವಾಲ್ಮೀಕಿ ಜೀವನ ಎಲ್ಲರಿಗೂ ಸ್ಫೂರ್ತಿ: ವಿಠ್ಠಲ ಖನೀಲದಾರ

‘ವಾಲ್ಮೀಕಿ ಜೀವನ ಎಲ್ಲರಿಗೂ ಸ್ಫೂರ್ತಿ: ವಿಠ್ಠಲ ಖನೀಲದಾರ

‘ವಾಲ್ಮೀಕಿ ಜೀವನ ಎಲ್ಲರಿಗೂ ಸ್ಫೂರ್ತಿ: ವಿಠ್ಠಲ ಖನೀಲದಾರ

ಮೂಡಲಗಿ: ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಭವನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಮೂಡಲಗಿ ಪುರಸಭೆ ಹಾಗೂ ಗೋಕಾಕದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯು‌ತ್ಸವ ಕಾರ್ಯಕ್ರಮವನ್ನು ಸೋಮವಾರ ಆಚರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಶ್ರೀಶೈಲ್ ಗುಡಮೆ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರ ಜೀವನ ಹಾಗೂ ಸಾಹಿತ್ಯ ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕವಾಗಿದೆ‘ ಎಂದರು.

ಗೋಕಾಕದ ಎಸ್ಎಲ್‌ಜೆ ಪದವಿ ಪೂರ್ವ ಕಾಲೇಜು ಇತಿಹಾಸ ಉಪನ್ಯಾಸಕ ವಿಠ್ಠಲ ಖನೀಲದಾರ ಮಹರ್ಷಿ ವಾಲ್ಮೀಕಿ ಅವರ ಜೀವನ, ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ರಾಮಾಯಣದ ಮಹತ್ವ ಕುರಿತು ವಿಶೇಷ ಉಪನ್ಯಾಸ ನೀಡಿದರು.

ವಿವಿಧ ಸಮಾಜದ ಮುಖಂಡರಾದ ಯಲ್ಲಾಲಿಂಗ ವಾಳದ, ಆನಂದ ಟಪಾಲದಾರ, ಮಲ್ಲಿಕಾರ್ಜುನ ಕಬ್ಬುರ, ಸಂತೋಷ ಸೋನವಾಲ್ಕರ, ಆನಂದರಾವ್ ನಾಯಕ, ಹಣಮಂತ ಗುಡ್ಲಮನಿ, ರಾಮಣ್ಣ ಹಂದಿಗುಂದ, ಗಿರೀಶ ಢವಳೇಶ್ವರ, ಇದ್ದರು.

ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಹಾಗೂ ಪೌರ ಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ನಿಲಯ ಪಾಲಕ ಭರತೇಶ ಬೋಳಿ ಸ್ವಾಗತಿಸಿದರು. ಶಿಕ್ಷಕ ಎ.ಜಿ. ಕೋಳಿ ನಿರೂಪಿಸಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ