ಕೆಜಿಎಫ್ | ಸುಲಿಗೆ ಪ್ರಕರಣ: ಮೂವರ ಬಂಧನ

ಕೆಜಿಎಫ್ | ಸುಲಿಗೆ ಪ್ರಕರಣ: ಮೂವರ ಬಂಧನ

ಕೆಜಿಎಫ್ | ಸುಲಿಗೆ ಪ್ರಕರಣ: ಮೂವರ ಬಂಧನ

ಕೆಜಿಎಫ್: ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈಚೆಗೆ ನಡೆದಿದ್ದ ಸುಲಿಗೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಈ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಭಾನುವಾರ ಬಂಧಿಸಿದ್ದಾರೆ.

ರಾಬರ್ಟ್‌ಸನ್ ಪೇಟೆಯ ನಿವಾಸಿಗಳಾದ ಕಾರ್‌ಮೇಗನ್ ಅಲಿಯಾಸ್ ಅಪೇನ್ (28), ಮಂಜುನಾಥ್ ಆರ್. ಅಲಿಯಾಸ್ ಮಂಜು (31) ಹಾಗೂ ಸುನೀಲ್ ಕುಮಾರ್ ಅಲಿಯಾಸ್ ಚಿನ್ನ (40) ಬಂಧಿತರು. ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ತೀವ್ರ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರಿಂದ ₹2 ಲಕ್ಷ ಮೌಲ್ಯದ 15.50 ಗ್ರಾಂ ತೂಕದ ಚಿನ್ನದ ಸರವನ್ನು ಜಪ್ತಿ ಮಾಡಲಾಗಿದ್ದು, ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅ.5ರಂದು ಬೆಳಗ್ಗೆ 6.45ರ ಅವಧಿಯಲ್ಲಿ ನಗರದ ಅಂಬೇಡ್ಕರ್ ಭವನದ ಹಿಂಭಾಗದ ಖಾಲಿ ಮೈದಾನದಲ್ಲಿ ವಸ್ತು ಪ್ರದರ್ಶನ ಆಯೋಜಿಸಲಾಗಿತ್ತು. ಅಲ್ಲಿ ದೋಣಿ ಪ್ರದರ್ಶಿಸುತ್ತಿದ್ದ ಶಂಕರ್ ಸಾಗರ್ ಬೋಸ್ಲೆ ಅವರ ಮೇಲೆ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಏಕಾಏಕಿ ಹಲ್ಲೆ ನಡೆಸಿ, ಅವರ ಕುತ್ತಿಗೆಯಲ್ಲಿದ್ದ 16 ಗ್ರಾಂ ತೂಕದ (ಅಂದಾಜು ಮೌಲ್ಯ ₹2 ಲಕ್ಷ) ಚಿನ್ನದ ಸರ ಕಿತ್ತು ಪರಾರಿಯಾಗಿದ್ದರು. ಈ ಕುರಿತು ಶಂಕರ್ ನೀಡಿದ ದೂರಿನ ಮೇರೆಗೆ ರಾಬರ್ಟ್‌ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಾಜಪೂತ್ ಹಾಗೂ ಡಿವೈಎಸ್‌ಪಿ ಲಕ್ಷ್ಮಯ್ಯ ವಿ. ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ರಾಬರ್ಟ್‌ಸನ್ ಪೇಟೆ ವೃತ್ತ ಸಿಪಿಐ ಅನಿಲ್‌ಕುಮಾರ್ ಎಂ.ಎಸ್. ಹಾಗೂ ಪಿಎಸ್‌ಐ ಮಹೇಶ್ ಮಾಲಿ ನೇತೃತ್ವದ ತಂಡವು ಕಾರ್ಯಾಚರಣೆ ಕೈಗೊಂಡಿತ್ತು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ