ಸೌರಶಕ್ತಿ: ಕಲ್ಯಾಣದ ಜನರಿಗಿಲ್ಲ ಆಸಕ್ತಿ

ಸೌರಶಕ್ತಿ: ಕಲ್ಯಾಣದ ಜನರಿಗಿಲ್ಲ ಆಸಕ್ತಿ

ಸೌರಶಕ್ತಿ: ಕಲ್ಯಾಣದ ಜನರಿಗಿಲ್ಲ ಆಸಕ್ತಿ

ಕಲಬುರಗಿ: ರಾಜ್ಯದಲ್ಲಿಯೇ ಅತಿ ಹೆಚ್ಚು ತಾಪಮಾನ ದಾಖಲಾಗುವ ಕಲ್ಯಾಣ ಕರ್ನಾಟಕದಲ್ಲಿ ಸೌರಶಕ್ತಿ ಉತ್ಪಾದನೆಗೆ ಹೇರಳ ಅವಕಾಶ ಇದ್ದರೂ ಜನರು ಆಸಕ್ತಿ ತೋರುತ್ತಿಲ್ಲ.

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಸೂರ್ಯಘರ್ ಮುಫ್ತ್‌ ಬಿಜ್ಲಿ ಯೋಜನೆಯ ಅಂಕಿ–ಅಂಶಗಳು ಇಲ್ಲಿನ ಜನರ ನಿರಾಸಕ್ತಿಯನ್ನು ಪ್ರತಿಫಲಿಸುತ್ತವೆ.

ಜೆಸ್ಕಾಂ ಮಾಹಿತಿ ಕಾರ್ಯಾಗಾರಗಳನ್ನು ಏರ್ಪಡಿಸಿ, ಜನರಿಗೆ ಜಾಗೃತಿ ಮೂಡಿಸಿದರೂ ನಿರೀಕ್ಷಿತ ಪ್ರಗತಿ ಸಾಧ್ಯವಾಗಿಲ್ಲ. ರಾಜ್ಯ ಸರ್ಕಾರ ‘ಗೃಹಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್‌ ನೀಡುತ್ತಿರುವುದೂ ನಿರಾಸಕ್ತಿಗೆ ಕಾರಣ ಎನ್ನಲಾಗುತ್ತಿದೆ.

ಜೆಸ್ಕಾಂ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ ಈ ಯೋಜನೆಯಡಿ ಇಲ್ಲಿಯವರೆಗೂ 3,736 ಜನರು ಅರ್ಜಿ ಸಲ್ಲಿಸಿದ್ದಾರೆ. 1,542 ಸೌರಶಕ್ತಿ ಫಲಕಗಳನ್ನು ಅಳವಡಿಸಲಾಗಿದೆ. ಅದಕ್ಕಾಗಿ ₹9.68 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.

ಜೆಸ್ಕಾಂ ವ್ಯಾಪ್ತಿಯಲ್ಲಿ ಬಳ್ಳಾರಿ ಜಿಲ್ಲೆಯ ಜನ ಹೆಚ್ಚು ಆಸಕ್ತಿ ತೋರಿಸಿದ್ದಾರೆ. 880 ಅರ್ಜಿಗಳು ಸಲ್ಲಿಕೆಯಾಗಿದ್ದು, 350 ಕುಟುಂಬಗಳು ಸೌರಫಲಕಗಳನ್ನು ಅಳವಡಿಸಿಕೊಂಡಿವೆ. ₹2.25 ಕೋಟಿ ಬಿಡುಗಡೆ ಮಾಡಲಾಗಿದೆ.

ಕಂದಾಯ ವಿಭಾಗವಾಗಿರುವ ಕಲಬುರಗಿ 2, ರಾಯಚೂರು 3 ಹಾಗೂ ಕೊಪ್ಪಳ 4ನೇ ಸ್ಥಾನ ದಲ್ಲಿದೆ.

ಯಾದಗಿರಿ ಜಿಲ್ಲೆಯಲ್ಲಿ ಅತಿ ಕಡಿಮೆ ಅರ್ಜಿಗಳು ಸಲ್ಲಿಕೆಯಾಗಿದ್ದು, ಕೇವಲ 32 ಕುಟುಂಬಗಳನ್ನು ಯೋಜನೆ ತಲುಪಿದೆ.

ನವೀಕರಿ ಸಬಹುದಾದ ಇಂಧನ ಮೂಲಗಳ ಬಳಕೆ ಉತ್ತೇಜಿಸಿ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ. ಇದರಡಿ ಮನೆಯ ಚಾವಣಿ ಮೇಲೆ ಸೌರಫಲಕ ಅಳವಡಿಕೆಗೆ ಸಹಾಯಧನ ನೀಡಲಾಗುತ್ತದೆ.

1 ಕಿಲೊ ವಾಟ್ ಸಾಮರ್ಥ್ಯಕ್ಕೆ ₹30 ಸಾವಿರ, 2 ಕೆ.ಡಬ್ಲ್ಯೂ ಸಾಮರ್ಥ್ಯಕ್ಕೆ ₹60 ಸಾವಿರ ಸೇರಿ ಒಟ್ಟು ₹78,000 ದವರೆಗೂ ಸಹಾಯಧನ ನೀಡಲಾಗುತ್ತದೆ. ಬ್ಯಾಂಕ್‌ಗಳು ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನೂ ನೀಡುತ್ತವೆ. ಇದರಿಂದ ವಿದ್ಯುತ್ ಬಿಲ್ ಉಳಿಸಬಹುದು. ಹೆಚ್ಚುವರಿ ವಿದ್ಯುತ್ ಅನ್ನು ಎಸ್ಕಾಂಗಳಿಗೆ ಮಾರಾಟ ಮಾಡಿ ಆದಾಯ ಗಳಿಸಬಹುದು.

ಈ ಸಂಬಂಧ ಪ್ರತಿಕ್ರಿಯೆ ಪಡೆಯಲು ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದಾಗ ಸಂಪರ್ಕಕ್ಕೆ ಸಿಗಲಿಲ್ಲ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ