ಎಸ್‌ಐಆರ್‌ | ಯಾರ ವಿರುದ್ಧವೂ ಕ್ರಮ ಇಲ್ಲ: ಸುಪ್ರೀಂ ಕೋರ್ಟ್‌

ಎಸ್‌ಐಆರ್‌ | ಯಾರ ವಿರುದ್ಧವೂ ಕ್ರಮ ಇಲ್ಲ: ಸುಪ್ರೀಂ ಕೋರ್ಟ್‌

ಎಸ್‌ಐಆರ್‌ | ಯಾರ ವಿರುದ್ಧವೂ ಕ್ರಮ ಇಲ್ಲ: ಸುಪ್ರೀಂ ಕೋರ್ಟ್‌

ನವದೆಹಲಿ: ಮಹಾರಾಷ್ಟ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಪಟ್ಟಿಯಿಂದ ಕೈಬಿಡಲಾಗಿರುವ ಮತದಾರರ ವಿರುದ್ಧ ‘ಯಾವುದೇ ಕಾನೂನು ಕ್ರಮ ಜರುಗಿಸುವುದಿಲ್ಲ’ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಮೌಖಿಕವಾಗಿ ಹೇಳಿದೆ.

ಮಹಾರಾಷ್ಟ್ರದಲ್ಲಿ ಕೈಗೊಂಡ ಎಸ್‌ಐಆರ್‌ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯನ್ನು ಪರಿಶೀಲಿಸಲು ಸಮ್ಮತಿಸುವಾಗ ಸುಪ್ರೀಂ ಕೋರ್ಟ್‌, ಈ ಭರವಸೆ ನೀಡಿದೆ.

ಲೆಕ್ಕಪರಿಶೋಧಕ ಮತ್ತು ಪತ್ರಕರ್ತರಾದ ಅರುಣ್ ಆನಂದಗಿರಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯಾ ಬಾಗ್ಚಿ ಮತ್ತು ವಿ. ಮೋಹನಾ ಅವರ ಪೀಠವು ಕೇಂದ್ರ ಸರ್ಕಾರ, ಭಾರತೀಯ ಚುನಾವಣಾ ಆಯೋಗ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.

ಆದರೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ನೀಡಿರುವ ಗಡುವು ವಿಸ್ತರಿಸಲು ಅಥವಾ ಅಂತಿಮ ಮತದಾರರ ಪಟ್ಟಿ ಪ್ರಕಟಿಸದಂತೆ ಚುನಾವಣಾ ಆಯೋಗವನ್ನು ತಡೆಯುವ ಸಂಬಂಧ ಮಧ್ಯಂತರ ಆದೇಶ ಹೊರಡಿಸಲು ನಿರಾಕರಿಸಿದ ಪೀಠ, ಮುಂದಿನ ವಿಚಾರಣೆಯನ್ನು ನವೆಂಬರ್‌ 5ಕ್ಕೆ ನಿಗದಿಪಡಿಸಿತು.

ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಅರವಿಂದ ದಾತಾರ್, ಮಹಾರಾಷ್ಟ್ರದಲ್ಲಿ ಮತದಾರರ ಪಟ್ಟಿಯಿಂದ ಕೈಬಿಡಲಾದ ಮತದಾರರು ನಮೂನೆ– 6 ಸಲ್ಲಿಸುವ ಮೂಲಕ ಮತ್ತೆಹೆಸರು ನೋಂದಾಯಿಸಲು ಮುಂದಾದರೆ ಕಾನೂನು ಕ್ರಮದ ಅಪಾಯವನ್ನು ಎದುರಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ಕಳವಳಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ‘ಯಾರ ವಿರುದ್ಧವೂ ಕಾನೂನು ಕ್ರಮ ಜರುಗಿಸುವುದಿಲ್ಲ’ ಎಂದು ತಿಳಿಸಿದರು.

ಮುಂಬೈ, ಪುಣೆಯಲ್ಲಿ ಕೈಗೊಂಡಅಭಿವೃದ್ಧಿ ಕಾಮಗಾರಿಗಳ ಸಂದರ್ಭದಲ್ಲಿತಾತ್ಕಾಲಿಕವಾಗಿ ಬೇರೆಡೆಗೆ ಸ್ಥಳಾಂತರಗೊಂಡವರನ್ನು ‘ವ್ಯಕ್ತಿ ಪತ್ತೆಯಾಗಿಲ್ಲ’ ಎಂಬ ಕಾರಣ ನೀಡಿ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ದಾತಾರ್‌ ತಿಳಿಸಿದರು.

ಮಹಾರಾಷ್ಟ್ರದಲ್ಲಿ ಒಟ್ಟು 9.79 ಕೋಟಿ ಮತದಾರರ ಪೈಕಿ ಸುಮಾರು 2ಕೋಟಿ ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈಬಿಡಲಾಗಿದೆ. ಅಲ್ಲದೆ, ‘ತಾರ್ಕಿಕ ವ್ಯತ್ಯಾಸ’ ಕಂಡುಬಂದಿದೆ ಎಂಬ ಕಾರಣ ನೀಡಿ ಇನ್ನೂ1.22 ಕೋಟಿ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ