ಶಿಕ್ಷಣ ಇಲಾಖೆ ಲೋಪ: ಮಾಜಿ ಸೈನಿಕರ ಆತಂಕ

ಶಿಕ್ಷಣ ಇಲಾಖೆ ಲೋಪ: ಮಾಜಿ ಸೈನಿಕರ ಆತಂಕ

ಶಿಕ್ಷಣ ಇಲಾಖೆ ಲೋಪ: ಮಾಜಿ ಸೈನಿಕರ ಆತಂಕ

ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಸಹ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಿರುವ ಮಾಜಿ ಸೈನಿಕರ ವಯೋಮಿತಿ ಮೀರಿದೆ ಎಂದು ಶಿಕ್ಷಣ ಇಲಾಖೆಯ ಲಾಗಿನ್‌ನಲ್ಲಿ ತೋರಿಸುತ್ತಿದೆ. ಇದರಿಂದಾಗಿ ಮಾಜಿ ಸೈನಿಕರ ಮೀಸಲಾತಿ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

‘ಕರ್ನಾಟಕ ಸಿವಿಲ್ ಸೇವಾ ನಿಯಮಗಳು 1977ರ ನಿಯಮ 6 (3)(ಸಿ) ಅನ್ವಯ ಮಾಜಿ ಸೈನಿಕರ ಮೀಸಲಾತಿ ಅಡಿ ಅರ್ಜಿ ಸಲ್ಲಿಸಿದವರಿಗೆ ಸೇನೆಯಲ್ಲಿ ಸಲ್ಲಿಸಿದ ಒಟ್ಟು ಸೇವೆ ಮತ್ತು ಹೆಚ್ಚುವರಿ 3 ವರ್ಷ ಸಡಿಲಿಕೆ ಅನ್ವಯವಾಗುತ್ತದೆ. ಆದರೆ, ಶಿಕ್ಷಣ ಇಲಾಖೆಯ ಅಧಿಕಾರಿಗಳ ತಪ್ಪಿನಿಂದಾಗಿ ನಮಗೆ ಅನ್ಯಾಯವಾಗಿದೆ’ ಎಂದು ಮಾಜಿ ಸೈನಿಕರು ತಿಳಿಸಿದರು.

ಈ ವಿಷಯವನ್ನು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ವಹಿಸಿಲ್ಲ. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅಥಣಿಗೆ ಬಂದಾಗ ಈ ಸಮಸ್ಯೆಯನ್ನು ಅವರ ಗಮನಕ್ಕೆ ತಂದು ಮನವಿ ಸಲ್ಲಿಸಲಾಗಿತ್ತು. ‘ನಿಮಗೆ ವಯೋಮಿತಿ ಸಡಿಲಿಕೆ ಇರುತ್ತದೆ, ಯಾಕೆ ಕೊಟ್ಟಿಲ್ಲ’ ಎಂದು ಕೇಳಿದ್ದರು. ಆದರೆ, ಇದುವರೆಗೂ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಎಂದು ಶಿಕ್ಷಕರ ಹುದ್ದೆ ಆಕಾಂಕ್ಷಿ ಗಳಾಗಿರುವ ಮಾಜಿ ಸೈನಿಕರು ತಿಳಿಸಿದ್ದಾರೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳ ತಪ್ಪಿನಿಂದ 25 ರಿಂದ 30 ಮಾಜಿ ಸೈನಿಕ ಅಭ್ಯರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ನಮಗೆ ನ್ಯಾಯ ಸಿಗುವಂತೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ