ಶಿಡ್ಲಘಟ್ಟ: ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಸಮನ್ವಯ ಸಭೆ

ಶಿಡ್ಲಘಟ್ಟ: ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಸಮನ್ವಯ ಸಭೆ

ಶಿಡ್ಲಘಟ್ಟ: ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಸಮನ್ವಯ ಸಭೆ

ಶಿಡ್ಲಘಟ್ಟ: ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌.ಡಿ.ಎ ಅಭ್ಯರ್ಥಿ ಕೆ.ಎಂ. ಸುರೇಶ್ ಪರ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಶಾಸಕ ಬಿ.ಎನ್. ರವಿಕುಮಾರ್ ಹೇಳಿದರು.

ತಾಲ್ಲೂಕಿನ ಹಂಡಿಗನಾಳದಲ್ಲಿ ಭಾನುವಾರ ನಡೆದ ಬಿಜೆಪಿ–ಜೆಡಿಎಸ್ ತಾಲ್ಲೂಕು ಸಮನ್ವಯ ಸಭೆಯಲ್ಲಿ ಮಾತನಾಡಿದರು.

ಎರಡೂ ಪಕ್ಷಗಳ ಮುಖಂಡರು ಪ್ರತಿ ಗ್ರಾಮದಲ್ಲಿರುವ ಪದವೀಧರ ಮತದಾರರನ್ನು ಸಂಪರ್ಕಿಸಿ, ಅಭ್ಯರ್ಥಿಯ ಪರ ಮತಯಾಚಿಸಬೇಕು. ಬೂತ್ ಮಟ್ಟದಲ್ಲಿ ಸಮನ್ವಯದಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದಿತ್ತು. 2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 143 ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‌.ಡಿ.ಎ ಅಭ್ಯರ್ಥಿಗಳಿಗೆ ಮುನ್ನಡೆ ದೊರೆತಿತ್ತು. ಪರಿಷತ್ ಚುನಾವಣೆ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.

ಎನ್‌.ಡಿ.ಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರು ಸುಮಾರು 25 ವರ್ಷಗಳಿಂದ ಬಿಜೆಪಿ ಕಾರ್ಯಕರ್ತರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರದ ವ್ಯಾಪ್ತಿಯ 34 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಮೇಲೆ ವಿಶ್ವಾಸವಿಟ್ಟು ಅವರು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಎರಡೂ ಪಕ್ಷಗಳ ಕಾರ್ಯಕರ್ತರು ಅವರ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸೀಕಲ್ ರಾಮಚಂದ್ರಗೌಡ ಮಾತನಾಡಿದರು. ಸಂಸದ ಎಂ.ಮಲ್ಲೇಶ್ ಬಾಬು, ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌.ಡಿ.ಎ ಅಭ್ಯರ್ಥಿ ಕೆ.ಎಂ. ಸುರೇಶ್ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ