ಪಶ್ಚಿಮ ಪದವೀಧರರ ಕ್ಷೇತ್ರ: ಕಾಂಗ್ರೆಸ್‌ನ ಲಿಂಬಿಕಾಯಿ ನಾಮಪತ್ರ ಸಲ್ಲಿಕೆ ಇಂದು

ಪಶ್ಚಿಮ ಪದವೀಧರರ ಕ್ಷೇತ್ರ: ಕಾಂಗ್ರೆಸ್‌ನ ಲಿಂಬಿಕಾಯಿ ನಾಮಪತ್ರ ಸಲ್ಲಿಕೆ ಇಂದು

ಪಶ್ಚಿಮ ಪದವೀಧರರ ಕ್ಷೇತ್ರ: ಕಾಂಗ್ರೆಸ್‌ನ ಲಿಂಬಿಕಾಯಿ ನಾಮಪತ್ರ ಸಲ್ಲಿಕೆ ಇಂದು

ಗದಗ: ‘ಪಶ್ಚಿಮ ಪದವೀಧರರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮೋಹನ ಲಿಂಬಿಕಾಯಿ ಅವರು ಅಕ್ಟೋಬರ್‌ 5ರಂದು ಮಧ್ಯಾಹ್ನ 12 ಗಂಟೆಗೆ, ಧಾರವಾಡದ ಕಲಾಭವನದಿಂದ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿ‌ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವರು’ ಎಂದು ಶಾಸಕ ಎಚ್‌.ಕೆ. ಪಾಟೀಲ ಹೇಳಿದರು.

ನಗರದ ಕಾಂಗ್ರೆಸ್‌ ಕಾರ್ಯಾಲಯದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೀಟ್ ಪರೀಕ್ಷೆಯಲ್ಲಿ ಅವ್ಯವಹಾರ, ಕೇಂದ್ರದಲ್ಲಿ ಅಸಮರ್ಪಕ ಆಡಳಿತ, ಚುನಾವಾಣಾ ಆಯೋಗ ಹುನ್ನಾರ, ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆ,‌ ಶಿಕ್ಷಣ‌ ಪದ್ಧತಿಯಲ್ಲಿ ವೈಫಲ್ಯ, ಯುವಕರ ಬದುಕು ನಾಶ ಮಾಡಿದ ಎನ್‌ಇಪಿ, ಅಸ್ತವ್ಯಸ್ಥಗೊಂಡ ದೇಶದ ಆಡಳಿತದ ವಿರುದ್ಧ ಜೆನ್‌ಜಿಗಳು ಅಸಮಾಧಾನಗೊಂಡಿದ್ದಾರೆ. ಸ್ವಯಂ ಪ್ರೇರಣೆಯಿಂದ ಮತದಾನಕ್ಕೆ ನೋಂದಣಿ ಮಾಡಿಸಿದ್ದಾರೆ’ ಎಂದರು.

ಅಭ್ಯರ್ಥಿ ಮೋಹನ ಲಿಂಬಿಕಾಯಿ ಮಾತನಾಡಿ, ‘6 ತಿಂಗಳಿಂದ ನಾಲ್ಕು ಜಿಲ್ಲೆಗಳಲ್ಲಿ ಸಂಚರಿಸಿ, ಶಿಕ್ಷಕರು, ಕಾರ್ಯಕರ್ತರು ಹಾಗೂ ಪದವೀಧರನ್ನು ಸಂಪರ್ಕಿಸಿ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿರುವೆ. ಶಾಲಾ–ಕಾಲೇಜಿಗೆ ಭೇಟಿ, ಶಿಕ್ಷಕರ ಮನವೊಲಿಸುವಿಕೆ, ಕಾರ್ಯಕರ್ತರ ಸಭೆಯಂತಹ ಚಟುವಟಿಕೆ ನಡೆಸಲಾಗಿದೆ. ಕ್ಷೇತ್ರದಲ್ಲಿ 16 ಕಾಂಗ್ರೆಸ್‌ ಶಾಸಕರೊಂದಿಗೆ ಶಿವರಾಮ ಹೆಬ್ಬಾರ ಅವರು ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಮನೆ ಮನೆ ಪ್ರಚಾರ ಕೈಗೊಳ್ಳಲಾಗುತ್ತದೆ’ ಎಂದು ತಿಳಿಸಿದರು.

‘22 ಸಾವಿರ ಶಿಕ್ಷಕರ ಹುದ್ದೆಗಳು ಸೇರಿದಂತೆ 74 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಕ್ರಮ, ಯುವನಿಧಿ ಯೋಜನೆ, ಸರ್ಕಾರಿ ನೌಕರರ ಆಗ್ರಹದಂತೆ ಒಪಿಎಸ್ ಜಾರಿಗಾಗಿ ತಜ್ಞರ ಸಮಿತಿ ರಚನೆಯಂತಹ ರಾಜ್ಯ ಸರ್ಕಾರದ ಕಾರ್ಯಗಳು ಈ ಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಸಹಕಾರಿಯಾಗಿವೆ’ ಎಂದು ಅಭಿಪ್ರಾಯಟ್ಟರು.

ಮುಂಖಂಡರಾದ ಡಿ.ಆರ್. ಪಾಟೀಲ, ವಾಸಣ್ಣ ಕುರುಡಗಿ, ಬಿ.ಬಿ. ಅಸೂಟಿ, ಅಕ್ಬರ್ ಸಾಬ್ ಬಾಬರ್ಚಿ, ಪ್ರಭು ಬುರಬುರೆ, ಸಿದ್ದು ಪಾಟೀಲ, ಅಶೋಕ ಮಂದಾಲಿ, ಉಮರ್‌ ಫಾರೂಕ್, ರವಿ ಮೂಲಿಮನಿ ಇದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ