ಚಿಂತಾಮಣಿ ನಗರದಲ್ಲಿ ಜೋರು ಮಳೆ

ಚಿಂತಾಮಣಿ ನಗರದಲ್ಲಿ ಜೋರು ಮಳೆ

ಚಿಂತಾಮಣಿ ನಗರದಲ್ಲಿ ಜೋರು ಮಳೆ

ಚಿಂತಾಮಣಿ: ನಗರದಲ್ಲಿ ಸೋಮವಾರ ಸಂಜೆ ಸುರಿದ ಜೋರು ಮಳೆಯಿಂದಾಗಿ ವಾತಾವರಣ ತಂಪಾಗಿದೆ.

ಸುಮಾರು ಒಂದು ಗಂಟೆ ಸುರಿದ ಮಳೆಯಿಂದಾಗಿ ರಸ್ತೆ, ಚರಂಡಿಗಳಲ್ಲಿ ನೀರು ತುಂಬಿ ಹರಿಯಿತು. ಮೂರು ದಿನಗಳಿಂದ ಬಿಸಿಲಿನಿಂದ ತತ್ತರಿಸಿದ್ದ ಜನತೆಗೆ ಸಂಜೆಯ ಮಳೆ ತಂಪೆನಿಸಿದೆ.

ಮಳೆಯಿಂದಾಗಿ ರಸ್ತೆಗಳ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಹಾಗೂ ಜನರ ಸಂಚಾರಕ್ಕೆ ಅಡಚಣೆ ಉಂಟಾಯಿತು.

ತಾಲ್ಲೂಕಿನಲ್ಲಿ ತಡವಾಗಿ ರಾಗಿ ಬಿತ್ತನೆ ನಡೆದಿದ್ದು, ರೈತರು ಕಳೆ ತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದರು. ವಾರದಿಂದ ಮಳೆ ಇಲ್ಲದೆ ಪೈರು ಬತ್ತುವ ಸ್ಥಿತಿಗೆ ತಲುಪಿತ್ತು. ಹಾಗಾಗಿ ಸಂಜೆ ಸುರಿದ ಮಳೆಯು ಬೆಳೆಗೆ ಜೀವಕಳೆ ತಂದಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ