
ಪಶ್ಚಿಮ ಪದವೀಧರ ಕ್ಷೇತ್ರ: ಅಭ್ಯರ್ಥಿಗಳ ಬಿರುಸಿನ ಪ್ರಚಾರ
ಲಕ್ಷ್ಮೇಶ್ವರ: ‘ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರನ್ನು ಗೆಲ್ಲಿಸಲು ಪಕ್ಷದ ಕಾರ್ಯಕರ್ತರು ಅದರಲ್ಲೂ ಯುವಕರು ಹೆಚ್ಚಿನ ಪ್ರಯತ್ನ ಮಾಡಬೇಕು’ ಎಂದು ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ಹೇಳಿದರು.
ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಚನ್ನಮ್ಮನ ವನದಲ್ಲಿ ಇತ್ತೀಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಮಾಜಿ ಶಾಸಕ ರಾಮಪ್ಪ ಲಮಾಣಿ. ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಎಸ್.ಪಿ. ಬಳಿಗಾರ. ಪುರಸಭೆ ಮಾಜಿ ಅಧ್ಯಕ್ಷರಾದ ವಿ.ಜಿ. ಪಡಗೇರಿ. ಜಯಮ್ಮ ಕಳ್ಳಿ. ಗುರುನಾಥ ದಾನಪ್ಪನವರ, ನಗರ ಕಾಂಗ್ರೆಸ್ ಅಧ್ಯಕ್ಷ ಅಂಬರೀಷ. ತೆಂಬದಮನಿ, ರಾಮಣ್ಣ ಲಮಾಣಿ ಶಿಗ್ಲಿ, ಸೋಮಣ್ಣ ಬೆಟಗೇರಿ ಇದ್ದರು.