
ವಚನ ಸಾಹಿತ್ಯ ಇಂದಿಗೂ ಪ್ರಸ್ತುತ: ಸುಧಾ ಕೌಜಗೇರಿ
ಹುಬ್ಬಳ್ಳಿ: ‘ವಚನ ಸಾಹಿತ್ಯದ ತತ್ವಗಳು, ಸಾಮಾಜಿಕ ಮೌಲ್ಯಗಳನ್ನು ಡಿಜಿಟಲ್ ಮಾಧ್ಯಮಗಳ ಮೂಲಕ ಯುವ ಸಮುದಾಯಕ್ಕೆ ತಲುಪಿಸಬೇಕು’ ಎಂದು ಉನ್ನತ ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕಿ ಸುಧಾ ಕೌಜಗೇರಿ ಎಂದು ಹೇಳಿದರು.
ಹುಬ್ಬಳ್ಳಿಯ ಕೆಎಲ್ಇ ಸಂಸ್ಥೆಯ ಕಾಡಸಿದ್ಧೇಶ್ವರ ಕಲಾ ಮಹಾವಿದ್ಯಾಲಯ ಮತ್ತು ಎಚ್.ಎಸ್.ಕೋತಂಬ್ರಿ ವಿಜ್ಞಾನ ಸಂಸ್ಥೆಯ ಐಕ್ಯೂಎಸಿ ಹಾಗೂ ಕನ್ನಡ ವಿಭಾಗದಿಂದ ಮಂಗಳವಾರ ನಡೆದ ಡಿಜಿಟಲ್ ಯುಗ ವಚನ ಸಾಹಿತ್ಯದ ಪ್ರಸ್ತುತತೆ ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ವಚನ ಸ್ಪಂದನ–ಸಂಶೋಧನ ಲೇಖನಗಳ ಸಂಕಲನ ಎಂಬ ಗ್ರಂಥ ಬಿಡುಗಡೆ ಮಾಡಲಾಯಿತು.
ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಸುಶೀಲಾದೇವಿ ಬಿ. ಬೆಟಗೇರಿ ಮಾತನಾಡಿದರು. ಸಂಸ್ಕೃತಿ ಚಿಂತಕ ಚಟ್ನಳ್ಳಿ ಮಹೇಶ್, ಡಾ.ಎಂ.ಎಂ.ಕಲಬುರ್ಗಿ ಟ್ರಸ್ಟ್‌ನ ಅಧ್ಯಕ್ಷ ವೀರಣ್ಣ ರಾಜೂರ ಭಾಗವಹಿಸಿದ್ದರು. ನಿವೃತ್ತ ಪ್ರಾಧ್ಯಾಪಕ ಎಸ್.ವಿ.ಪಟ್ಟಣಶೆಟ್ಟಿ, ಕಾಲೇಜಿನ ಪ್ರಾಚಾರ್ಯೆ ಸುಮಂಗಲಾ ಬಿ. ಪಾಟೀಲ, ಐಕ್ಯೂಎಸಿ ಸಂಯೋಜಕ ಸಿದ್ದೇಶ್ ಎಂ.ಬಿ, ಉಪನ್ಯಾಸಕ ಈರಣ್ಣ ಎಸ್. ಪೂಜಾರ ಇದ್ದರು.