ಚಿಂತಾಮಣಿ-ಬೆಂಗಳೂರು ಹೆದ್ದಾರಿಯಲ್ಲಿ ಬಸ್‌ಗೆ ಕಾರು ಡಿಕ್ಕಿ: ಚಾಲಕ ಸಾವು

ಚಿಂತಾಮಣಿ-ಬೆಂಗಳೂರು ಹೆದ್ದಾರಿಯಲ್ಲಿ ಬಸ್‌ಗೆ ಕಾರು ಡಿಕ್ಕಿ: ಚಾಲಕ ಸಾವು

ಚಿಂತಾಮಣಿ-ಬೆಂಗಳೂರು ಹೆದ್ದಾರಿಯಲ್ಲಿ ಬಸ್‌ಗೆ ಕಾರು ಡಿಕ್ಕಿ: ಚಾಲಕ ಸಾವು

ಚಿಂತಾಮಣಿ: ಚಿಂತಾಮಣಿ-ಬೆಂಗಳೂರು ರಾಜ್ಯ ಹೆದ್ದಾರಿ ಪೆರಮಾಚನಹಳ್ಳಿ ಬಳಿ ಶುಕ್ರವಾರ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ಸಿನಲ್ಲಿದ್ದ ಕೆಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

ಮೃತರು ಕೋಲಾರ ಜಿಲ್ಲೆ ಶ್ರೀನಿವಾಸಪುರದ ಭರತ್ ಕುಮಾರ್ (35). ಬಸ್ ಬೆಂಗಳೂರಿನಿಂದ ಚಿಂತಾಮಣಿಗೆ ಬರುತ್ತಿತ್ತು. ಕಾರು ಚಿಂತಾಮಣಿ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು.

ಪೆರಮಾಚನಹಳ್ಳಿ ಗೇಟ್ ಬಳಿ ಕಾರು ಅತಿವೇಗ ಮತ್ತು ಅಜಾಗರೂಕತೆಯಿಂದ ಎಡಗಡೆಯಿಂದ ಬಲಭಾಗಕ್ಕೆ ಬರುತ್ತಿತ್ತು. ಇದನ್ನು ಗಮನಿಸಿದ ಬಸ್ ಚಾಲಕ ಅಪಘಾತ ತಪ್ಪಿಸಲು ಲೈಟ್ ಹಾಕಿ, ಹಾರನ್ ಮಾಡಿ ಬಸ್ ಅನ್ನು ಇನ್ನಷ್ಟು ಎಡಭಾಗಕ್ಕೆ ತಿರುಗಿಸಿದರೂ ಪ್ರಯೋಜನವಾಗಲಿಲ್ಲ. ನಿಯಂತ್ರಣ ತಪ್ಪಿದ ಕಾರು ಬಸ್‌ಗೆ ಡಿಕ್ಕಿಯಾಯಿತು. ಡಿಕ್ಕಿ ರಭಸಕ್ಕೆ ಕಾರು ರಸ್ತೆ ಎಡಭಾಗಕ್ಕೆ ಉರುಳಿ ಬಿದ್ದರೆ, ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ಹಳ್ಳಕ್ಕೆ ನುಗ್ಗಿ ಮುಂಭಾಗ ಜಖಂಗೊಂಡಿದೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಕಾರಿನಲ್ಲಿದ್ದ ಮತ್ತೊಬ್ಬ ವ್ಯಕ್ತಿಗೂ ಗಾಯಗಳಾಗಿದ್ದು, ವಿವರಗಳು ಲಭ್ಯವಾಗಿಲ್ಲ. ಗಾಯಾಳುಗಳನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ