ಮೊದಲು ನಮ್ಮ ಶಾಸಕರನ್ನು ಬಿಜೆ‍ಪಿಗೆ ಸೇರಿಸಿಕೊಳ್ಳಲಿ:ಡಿಕೆಶಿ ವ್ಯಂಗ್ಯ

ಮೊದಲು ನಮ್ಮ ಶಾಸಕರನ್ನು ಬಿಜೆ‍ಪಿಗೆ ಸೇರಿಸಿಕೊಳ್ಳಲಿ:ಡಿಕೆಶಿ ವ್ಯಂಗ್ಯ

ಮೊದಲು ನಮ್ಮ ಶಾಸಕರನ್ನು ಬಿಜೆ‍ಪಿಗೆ ಸೇರಿಸಿಕೊಳ್ಳಲಿ:ಡಿಕೆಶಿ ವ್ಯಂಗ್ಯ

ನವದೆಹಲಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ‘ಮೊದಲು ನಮ್ಮ ಶಾಸಕರನ್ನು ಸೇರಿಸಿಕೊಳ್ಳಲಿ. ತಡ ಮಾಡುವುದು ಬೇಡ’ ಎಂದು ವ್ಯಂಗ್ಯವಾಡಿದರು.

ಸೋಮವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದು ಯಾರು ಎಂಬುದನ್ನು ಪತ್ತೆ ಹಚ್ಚಲು ಅವರಿಗೆ ಸಾಧ್ಯವಾಗಲಿಲ್ಲ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೂ ಹೇಳಲು ಸಾಧ್ಯವಾಗಲಿಲ್ಲ. ಅವರ ನಾಯಕರು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಅವರು ಸಮಯ ವ್ಯರ್ಥ ಮಾಡದೆ ನಮ್ಮ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಿ’ ಎಂದರು.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌, ‘ವಿಜಯೇಂದ್ರ ಹಗಲು ಕನಸು ಕಾಣಲಿ, ತೊಂದರೆ ಇಲ್ಲ. ಅವರು ಮುಖ್ಯಮಂತ್ರಿಯಾಗುವ ಆತುರದಲ್ಲಿದ್ದಾರೆ’ ಎಂದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ