ಸೌಲಭ್ಯ ವಿತರಣೆಯಲ್ಲಿ ತಾರತಮ್ಯ ಆರೋಪ: ಕಬ್ಬೂರ ಪಟ್ಟಣ ಪಂಚಾಯಿತಿಗೆ ಮುತ್ತಿಗೆ

ಸೌಲಭ್ಯ ವಿತರಣೆಯಲ್ಲಿ ತಾರತಮ್ಯ ಆರೋಪ: ಕಬ್ಬೂರ ಪಟ್ಟಣ ಪಂಚಾಯಿತಿಗೆ ಮುತ್ತಿಗೆ

ಸೌಲಭ್ಯ ವಿತರಣೆಯಲ್ಲಿ ತಾರತಮ್ಯ ಆರೋಪ: ಕಬ್ಬೂರ ಪಟ್ಟಣ ಪಂಚಾಯಿತಿಗೆ ಮುತ್ತಿಗೆ

ಕಬ್ಬೂರ: ಹೊಲಿಗೆ ಯಂತ್ರ, ಶುದ್ಧ ಕುಡಿಯುವ ನೀರಿನ ಘಟಕ, ಸೋಲಾರ್ ಲೈಟ್ ವಿತರಣೆ ಹಾಗೂ ಫಲಾನುಭವಿಗಳ ಆಯ್ಕೆಯಲ್ಲಿ ತಾರತಮ್ಯ ನಡೆದಿದೆ ಎಂದು ಆರೋಪಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಜನರು ಬುಧವಾರ ಕಬ್ಬೂರ ಪಟ್ಟಣ ಪಂಚಾಯಿತಿಗೆ ಮುತ್ತಿಗೆ ಹಾಕಿ ಆಕ್ಷೇಪ ವ್ಯಕ್ತಪಡಿಸಿದರು.

ಎರಡು ವರ್ಷಗಳ ಹಿಂದೆ ಪಟ್ಟಣ ಪಂಚಾಯಿತಿ ವತಿಯಿಂದ ಹೊಲಿಗೆ ಯಂತ್ರ, ಶುದ್ಧ ಕುಡಿಯುವ ನೀರಿನ ಘಟಕ, ಸೋಲಾರ್ ಲೈಟ್ ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಪಡೆದುಕೊಳ್ಳಲಾಗಿತ್ತು. ಆದರೆ ಅರ್ಹತೆ ಹೊಂದಿರುವ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸುವಲ್ಲಿ ವಿಳಂಬವಾಗಿದ್ದು, ಫಲಾನುಭವಿಗಳ ಆಯ್ಕೆಯಲ್ಲಿ ತಾರತಮ್ಯ ನಡೆದಿದೆ ಎಂದು ಆರೋಪಿಸಿದರು.

ಕಂದಾಯ ನಿರೀಕ್ಷಕ ಅಧಿಕಾರಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕರರ ಅಹವಾಲುಗಳನ್ನು ಆಲಿಸಿ, ಎಂಟು ದಿನಗಳೊಳಗೆ ಸಮಸ್ಯೆ ಬಗೆಹರಿಸುವಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಸೂಚನೆ ನೀಡಿದರು. ನಾಮದೇವ ಹಿರೇಕೊಡಿ, ಸದಾಶಿವ ಕಾಂಬಳೆ, ದಿಲೀಪ ಅಗಸಿಮನಿ, ದುಂಡಪ್ಪ ಜೋಡಟ್ಟಿ, ಕೃಷ್ಣಪ್ಪ ಮಾದರ, ಕಲ್ಲಪ್ಪ ಪಿರಾಪಗೊಳ ಇದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ