ಗೃಹರಕ್ಷಕರ ಸೇವೆ ಶ್ಲಾಘನೀಯ: ಜಿಲ್ಲಾ ಪೊಲಿಸ್‌ ವರಿಷ್ಠಾಧಿಕಾರಿ ಹರಿರಾಮ್ ಶಂಕರ್

ಗೃಹರಕ್ಷಕರ ಸೇವೆ ಶ್ಲಾಘನೀಯ: ಜಿಲ್ಲಾ ಪೊಲಿಸ್‌ ವರಿಷ್ಠಾಧಿಕಾರಿ ಹರಿರಾಮ್  ಶಂಕರ್

ಗೃಹರಕ್ಷಕರ ಸೇವೆ ಶ್ಲಾಘನೀಯ: ಜಿಲ್ಲಾ ಪೊಲಿಸ್‌ ವರಿಷ್ಠಾಧಿಕಾರಿ ಹರಿರಾಮ್ ಶಂಕರ್

ಉಡುಪಿ: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್ ಇಲಾಖೆಯಂತೆಯೇ ಗೃಹರಕ್ಷಕರು ಕೂಡ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರ ಕಾರ್ಯವನ್ನು ಪರಿಗಣಿಸಿ ಜಿಲ್ಲೆಯಲ್ಲಿ 30 ಜನ ಗೃಹರಕ್ಷಕರನ್ನು ಪೊಲೀಸ್ ಇಲಾಖೆಗೆ ನಿಯೋಜಿಸುವುದಕ್ಕೆ ಅಗತ್ಯ ಪ್ರಕ್ರಿಯೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಜಿಲ್ಲಾ ಪೊಲಿಸ್‌ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು.

ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅಕ್ಕ ಪಡೆ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು ಜನರಿಂದ ಮೆಚ್ಚುಗೆ ಪಡೆದಿದೆ. ಗೃಹರಕ್ಷಕರಿಗೆ ತಮ್ಮ ಮಾನಸಿಕ ಆರೋಗ್ಯ ಹಾಗೂ ದೈಹಿಕ ಸಾಮರ್ಥ್ಯವನ್ನು ವೃದ್ದಿಸಿಕೊಳ್ಳಲು ಕ್ರೀಡೆ ಸಹಕಾರಿಯಾಗಿದೆ ಎಂದರು.

ಗೃಹರಕ್ಷಕ ದಳದ ಸಮಾದೇಷ್ಟ ರೋಶನ್ ಕುಮಾರ್ ಶೆಟ್ಟಿ ಮಾತನಾಡಿದರು. ಕ್ರೀಡಾಕೂಟದಲ್ಲಿ ವಿಜೇತರಾದ ಸ್ಪರ್ಧಾಳುಗಳಿಗೆ ಬಹುಮಾನ ವಿತರಿಸಲಾಯಿತು. ಉದ್ಯಮಿಗಳಾದ ಸಂಪತ್ ಶೆಟ್ಟಿ, ಅಜಯ್ ಪಿ.ಶೆಟ್ಟಿ, ಚಿಕ್ಕಮಗಳೂರು ಜಿಲ್ಲೆಯ ಗೃಹರಕ್ಷಕ ದಳದ ಸಮಾದೇಷ್ಟರಾದ ನಸೀಮ್ ತಾಜ್ ಉಪಸ್ಥಿತರಿದ್ದರು.

ಉಡುಪಿ ಜಿಲ್ಲೆ ಗೃಹರಕ್ಷಕ ದಳದ ಸೆಕೆಂಡ್ ಇನ್ ಕಮಾಂಡ್ ರಾಜೇಶ್ ಕೆ.ಸಿ.ಸ್ವಾಗತಿಸಿದರು. ಸ್ಟೀವನ್ ಪ್ರಕಾಶ್‌ ಕಾರ್ಯಕ್ರಮ ನಿರೂಪಿಸಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ