ಸುಂಟಿಕೊಪ್ಪ ಕಾಲೇಜಿನಲ್ಲಿ ಸಸಿ ನೆಟ್ಟ ವಿದ್ಯಾರ್ಥಿಗಳು

ಸುಂಟಿಕೊಪ್ಪ ಕಾಲೇಜಿನಲ್ಲಿ ಸಸಿ ನೆಟ್ಟ ವಿದ್ಯಾರ್ಥಿಗಳು

ಸುಂಟಿಕೊಪ್ಪ ಕಾಲೇಜಿನಲ್ಲಿ ಸಸಿ ನೆಟ್ಟ ವಿದ್ಯಾರ್ಥಿಗಳು

ಸುಂಟಿಕೊಪ್ಪ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾಲೇಜಿನ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆ ಹಾಗೂ ಸಮಾಜ ಸೇವೆಯ ಮಹತ್ವವನ್ನು ಸಾರಲಾಯಿತು.

ಪ್ರಾಂಶುಪಾಲರಾದ ಬಿ.ಕೆ.ಕುಮಾರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಶಿಸ್ತು, ಸಾಮಾಜಿಕ ಜವಾಬ್ದಾರಿ ಮತ್ತು ಪರಿಸರ ಕಾಳಜಿಯನ್ನು ಬೆಳೆಸುವಲ್ಲಿ ಎನ್‌ಎಸ್ಎಸ್ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎನ್ಎಸ್ಎಸ್ ಸಂಯೋಜಕ ಸಿ.ಎಚ್. ರವಿ, ದೈಹಿಕ ಶಿಕ್ಷಣ ನಿರ್ದೇಶಕಿ ಪಿ.ಪಿ. ಜಯಂತಿ, ಕನ್ನಡ ಸಹಾಯಕ ಪ್ರಾಧ್ಯಾಪಕ ಸುನಿಲ್ ಕುಮಾರ್, ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ರವಿಶಂಕರ್, ಎನ್.ಎನ್‌‌.ಕುಮಾರ್ ಉಪಸ್ಥಿತರಿದ್ದರು.

'ನನಗಲ್ಲ ನಿನಗೆ' ಎಂಬ ಧ್ಯೇಯವಾಕ್ಯದಂತೆ ಸಮಾಜದ ಒಳಿತಿಗಾಗಿ ಸೇವೆ ಸಲ್ಲಿಸುವ ಸಂಕಲ್ಪದೊಂದಿಗೆ ಕಾರ್ಯಕ್ರಮವನ್ನು ಆಚರಿಸಲಾಯಿತು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ