ದೇಶದಾದ್ಯಂತ ವಿಶ್ವಾಸ ಕಳೆದುಕೊಂಡ ಕಾಂಗ್ರೆಸ್‌: ಬಿ.ವೈ.ವಿಜಯೇಂದ್ರ

ದೇಶದಾದ್ಯಂತ ವಿಶ್ವಾಸ ಕಳೆದುಕೊಂಡ ಕಾಂಗ್ರೆಸ್‌: ಬಿ.ವೈ.ವಿಜಯೇಂದ್ರ

ದೇಶದಾದ್ಯಂತ ವಿಶ್ವಾಸ ಕಳೆದುಕೊಂಡ ಕಾಂಗ್ರೆಸ್‌: ಬಿ.ವೈ.ವಿಜಯೇಂದ್ರ

ಚಿತ್ರದುರ್ಗ: ‘ಚುನಾವಣೆಯಲ್ಲಿ ಸತತ ಸೋಲಿನ ಸುಳಿಯಲ್ಲಿ ಸಿಲುಕಿರುವ ಕಾಂಗ್ರೆಸ್‌ ಪಕ್ಷ ದೇಶದಾದ್ಯಂತ ಜನರ ವಿಶ್ವಾಸ ಕಳೆದುಕೊಂಡಿದೆ. ಇದರಿಂದ ಹತಾಶರಾಗಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.

ನಗರದ ವಾಲ್ಮೀಕಿ ಭವನದಲ್ಲಿ ಶನಿವಾರ ಆಗ್ನೇಯ ಪದವೀಧರ ಚುನಾವಣೆ ಪ್ರಯುಕ್ತ ಬಿಜೆಪಿ– ಜೆಡಿಎಸ್ ವತಿಯಿಂದ ಹಮ್ಮಿಕೊಂಡಿದ್ದ ಮತದಾರರ ಸಭೆಯಲ್ಲಿ ಮಾತನಾಡಿದರು.

‘ಎನ್‍ಡಿಎ ಮೈತ್ರಿಕೂಟ ಜನರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, 12 ವರ್ಷಗಳಿಂದ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ವಿಶ್ವದಾದ್ಯಂತ ಹೆಚ್ಚಾಗಿದೆ. ನೆಹರೂ ಕುಟುಂಬದ ರಾಹುಲ್ ಗಾಂಧಿ ಎಂದಿಗೂ ಈ ದೇಶದ ಪ್ರಧಾನಿ ಆಗುವುದಿಲ್ಲ. ಈ ಕಾರಣದಿಂದ ಅವರು ಹತಾಶರಾಗಿದ್ದಾರೆ’ ಎಂದು ಆರೋಪಿಸಿದರು.

‘ಕಾಂಗ್ರೆಸ್ ಪಕ್ಷಕ್ಕೆ ನ್ಯಾಯಾಂಗದ ಮೇಲೆ ಭರವಸೆ ಇಲ್ಲ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನೇ ಪ್ರಶ್ನೆ ಮಾಡುವ ಹಂತಕ್ಕೆ ತಲುಪಿದ್ದಾರೆ. ರಾಹುಲ್‌ ಗಾಂಧಿ ಅವರು ದೇಶದ ಯುವ ಸಂಘಟನೆಗಳನ್ನು ದುರ್ಬಳಕೆ ಮಾಡಿಕೊಂಡು ದೇಶದಲ್ಲಿ ಅರಾಜಕತೆ ಸೃಷ್ಟಿ ಮಾಡಲು ಯತ್ನಿಸುತ್ತಿದ್ದಾರೆ’ ಎಂದು ದೂರಿದರು.

‘ಚುನಾವಣೆ ಗೆಲ್ಲಲಾಗದ ಸ್ಥಿತಿಗೆ ತಲುಪಿರುವ ಕಾಂಗ್ರೆಸ್‌ ಈಗ ಅನ್ಯ ಮಾರ್ಗದ ಮೂಲಕ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್‌ ಮುಖಂಡರು ಸಾಂವಿಧಾನಿಕ ಸಂಸ್ಥೆಗಳಾದ ಸಿಬಿಐ, ಇಡಿ, ಐಟಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ. 70 ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್‌ನವರಿಗೆ ಸಂವಿಧಾನದ ಮೇಲೆ ಯಾವುದೇ ಗೌರವ ಇಲ್ಲ’ ಎಂದು ಸಂಸದ ಗೋವಿಂದ ಕಾರಜೋಳ ಆರೋಪಿಸಿದರು.

‘ಯುವಜನರನ್ನು ತಮ್ಮ ಕಡೆ ಸೆಳೆದುಕೊಳ್ಳಲು ಕಾಂಗ್ರೆಸ್‌ ಪಕ್ಷ ಕಸರತ್ತು ಮಾಡುತ್ತಿದೆ. ವಿದ್ಯಾರ್ಥಿ ಸಂಘಟನೆಗಳನ್ನು ಎತ್ತಿಕಟ್ಟಿ ದಿಕ್ಕು ತಪ್ಪಿಸುತ್ತಿದ್ದಾರೆ. ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶೇ 90ರಷ್ಟು ಬಿಜೆಪಿ ಬೆಂಬಲಿಗರು ಗೆದ್ದಿದ್ದಾರೆ. 17 ವಿವಿಗಳ ವಿದ್ಯಾರ್ಥಿ ಸಂಘಟನೆಗಳ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ. ಬಿಜೆಪಿಯ ಗೆಲುವಿನ ಹಾದಿಯನ್ನು ಕಾಂಗ್ರೆಸ್‌ ತಪ್ಪಿಸಲು ಸಾಧ್ಯವಿಲ್ಲ’ ಎಂದು ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹೇಳಿದರು.

ಶಾಸಕ ಎಂ.ಚಂದ್ರಪ್ಪ, ‘ಕೆ.ಎಂ.ಸುರೇಶ್ ಅತ್ಯುತ್ತಮ ಅಭ್ಯರ್ಥಿಯಾಗಿದ್ದು, ಅವರನ್ನು ಗೆಲ್ಲಿಸಲು ಎಲ್ಲಾ ಕಾರ್ಯಕರ್ತರು ಶ್ರಮಿಸಬೇಕು. ಜಿಲ್ಲೆಯಲ್ಲಿ ಸುರೇಶ್ ಅವರ ಪರವಾದ ವಾತಾವರಣ ಸೃಷ್ಟಿಯಾಗಿದೆ. ನಮ್ಮ ಜಿಲ್ಲೆಯಲ್ಲಿ ಸುಮಾರು 48 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಇರುವುದರಿಂದ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಮಾಜಿ ಶಾಸಕರಾದ ಎಸ್.ಕೆ.ಬಸವರಾಜನ್, ಮುಖಂಡರಾದ ನೇರ್ಲಗುಂಟೆ ತಿಪ್ಪೇಸ್ವಾಮಿ, ವೈ.ಎ.ನಾರಾಯಣಸ್ವಾಮಿ, ಜಿ.ಎಚ್‌.ಮೋಹನ್ ಕುಮಾರ್, ಹನುಮಂತೇಗೌಡ ಇದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ