
ಉಜಿರೆ | ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ: ಮೂವರ ಬಂಧನ
ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ನಾವೂರಿನ ಸ್ವಾತಿ ಕಟ್ಟಡದಲ್ಲಿರುವ ಡಾ.ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ರವಿಕುಮಾರ್ (31), ದಿನೇಶ್ ಪ್ರಭು (51) ಮತ್ತು ಸುರೇಶ್ ಪಿ.ಎನ್. (44) ಬಂಧಿತ ಆರೋಪಿಗಳು.
ಡಾ.ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ಗೆ ಅ.7ರಂದು ತಡರಾತ್ರಿ ಡೀಸೆಲ್ ಸುರಿದು ಬೆಂಕಿ ಹಚ್ಚಿದ್ದರು. ವೈದ್ಯಕೀಯ ಸಲಕರಣೆಗಳು ಹಾಗೂ ಔಷಧಿಗಳು ಬೆಂಕಿಗಾಹುತಿಯಾಗಿದ್ದು, ಸುಮಾರು ₹3 ಲಕ್ಷ ನಷ್ಟವಾಗಿರುವುದಾಗಿ ಅಂದಾಜಿಸಲಾಗಿತ್ತು.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹೆಚ್ಚುವರಿ ಎಸ್ಪಿ ಅನಿಲ್ಕುಮಾರ್ ಬೂಮ ರೆಡ್ಡಿ, ಡಿವೈಎಸ್ಪಿ ರೋಹಿಣಿ ಸಿ.ಕೆ., ಸಿಪಿಐ ರವಿ ಬಿ.ಎಸ್. ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಸಲಾಗುತ್ತಿದೆ.