ಜನಪರ ಆಡಳಿತಕ್ಕಾಗಿ ಕಾಂಗ್ರೆಸ್‌ ಬೆಂಬಲಿಸಿ - ವಿನಯ್ ಕುಲಕರ್ಣಿ ಮನವಿ

ಜನಪರ ಆಡಳಿತಕ್ಕಾಗಿ ಕಾಂಗ್ರೆಸ್‌ ಬೆಂಬಲಿಸಿ - ವಿನಯ್ ಕುಲಕರ್ಣಿ ಮನವಿ

ಜನಪರ ಆಡಳಿತಕ್ಕಾಗಿ ಕಾಂಗ್ರೆಸ್‌ ಬೆಂಬಲಿಸಿ - ವಿನಯ್ ಕುಲಕರ್ಣಿ ಮನವಿ

ಧಾರವಾಡ: ‘ಕಾಂಗ್ರೆಸ್ ಪಕ್ಷದ ಜನಪರ ಆಡಳಿತ, ಅಭಿವೃದ್ಧಿಪರ ಚಿಂತನೆ ಹಾಗೂ ಸಮಾಜದ ಎಲ್ಲ ವರ್ಗಗಳ ಕಲ್ಯಾಣಕ್ಕಾಗಿ ಸರ್ಕಾರ ಹಮ್ಮಿಕೊಂಡಿರುವ ಯೋಜನೆಗಳನ್ನು ಪರಿಗಣಿಸಿ, ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರನ್ನು ಬೆಂಬಲಿಸಬೇಕು’ ಎಂದು ಶಾಸಕ ವಿನಯ್ ಕುಲಕರ್ಣಿ ಮನವಿ ಮಾಡಿದರು.

ನಗರದ ಜೆಎಸ್‍ಎಸ್ ಕಾಲೇಜಿನಲ್ಲಿ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಪರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ರಾಜ್ಯದ ಕಾಂಗ್ರೆಸ್ ಸರ್ಕಾರವು ಶಿಕ್ಷಣ, ಸಾಮಾಜಿಕ ಸಮಾನತೆ, ಮಹಿಳಾ ಸಬಲೀಕರಣ ಹಾಗೂ ಯುವಜನರ ಉಜ್ವಲ ಭವಿಷ್ಯಕ್ಕಾಗಿ ಹಲವು ಮಹತ್ವದ ಯೋಜನೆಗಳನ್ನು ರೂಪಿಸಿ ಯಶಸ್ವಿಯಾಗಿ ಜಾರಿಗೆ ತಂದಿದೆ’ ಎಂದರು.

‘ಪದವೀಧರರು ಮತ್ತು ಶಿಕ್ಷಕರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವುದಕ್ಕಾಗಿ ಯೋಚಿಸಬೇಕು. ಸಾರ್ವಜನಿಕರ ಆಶೋತ್ತರಗಳಿಗೆ ನಿರಂತರವಾಗಿ ಸ್ಪಂದಿಸುವ ಗುಣ ಹೊಂದಿರುವ ಮೋಹನ್ ಲಿಂಬಿಕಾಯಿ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕು’ ಎಂದು ಕೋರಿದರು.

ಜೆಎಸ್‍ಎಸ್ ಕಾಲೇಜಿನ ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ