ಉಡುಪಿ: ಆಸ್ಪತ್ರೆ ಕಟ್ಟಡದಿಂದ ಕೆಳಗೆ ಜಿಗಿದ ರೋಗಿ

ಉಡುಪಿ: ಆಸ್ಪತ್ರೆ ಕಟ್ಟಡದಿಂದ ಕೆಳಗೆ ಜಿಗಿದ ರೋಗಿ

ಉಡುಪಿ: ಆಸ್ಪತ್ರೆ ಕಟ್ಟಡದಿಂದ ಕೆಳಗೆ ಜಿಗಿದ ರೋಗಿ

ಉಡುಪಿ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ವ್ಯಕ್ತಿಯೊಬ್ಬರು ಬುಧವಾರ ವಾರ್ಡ್‌ನ ಗಾಜಿನ ಕಿಟಕಿ ಹಾಗೂ ಕಟ್ಟಡದ ಹೊರಭಾಗದ ರಕ್ಷಣಾ ರಚನೆಯನ್ನು  ಮುರಿದು ನಾಲ್ಕನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾರೆ.

ತಕ್ಷಣವೇ ಸ್ಥಳಕ್ಕೆ ಧಾವಿಸಿದ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದ ರೋಗಿಯನ್ನು ತುರ್ತು ಚಿಕಿತ್ಸೆಗೆ ಸ್ಥಳಾಂತರಿಸಿದರು. ಇದರಿಂದ ರೋಗಿಗಳು ಹಾಗೂ ಸಂದರ್ಶಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

‘ರೋಗಿಯ ಸ್ಥಿತಿ ಸ್ಥಿರವಾಗಿದ್ದು, ಆಸ್ಪತ್ರೆಯ ವೈದ್ಯರ ಆರೈಕೆಯಲ್ಲಿ ಚಿಕಿತ್ಸೆ ಮುಂದುವರಿದಿದೆ’ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

‘ಕಾನೂನಾತ್ಮಕ ನಿಯಮಗಳಂತೆ ಈ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಮಾಹಿತಿ ನೀಡಲಾಗಿದ್ದು, ಆಸ್ಪತ್ರೆಯು ಸಂಪೂರ್ಣ ಸಹಕಾರ ನೀಡುತ್ತಿದೆ. ರೋಗಿಯ ಗೋಪ್ಯತೆಯನ್ನು ಗೌರವಿಸುವ ದೃಷ್ಟಿಯಿಂದ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗುವುದಿಲ್ಲ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ