ಕಿತ್ತೂರು ಉತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಸೂಚನೆ

ಕಿತ್ತೂರು ಉತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಸೂಚನೆ

ಕಿತ್ತೂರು ಉತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಸೂಚನೆ

ಬೆಳಗಾವಿ: ‘ಇದೇ 23ರಿಂದ 25ರವರೆಗೆ ನಡೆಯಲಿರುವ ಕಿತ್ತೂರು ಉತ್ಸವ ಪ್ರಯುಕ್ತ ರಚಿಸಿರುವ ವಿವಿಧ ಉಪ ಸಮಿತಿಗಳು ಪರಸ್ಪರ‌ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು. ಉತ್ಸವ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಉತ್ಸವದ ಉಪಸಮಿತಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ವಿಜಯಜ್ಯೋತಿ ಯಾತ್ರೆ, ಸ್ವಾಗತ, ವಸತಿ, ಉಟೋಪಚಾರ, ವೇದಿಕೆ, ಸಾಂಸ್ಕೃತಿಕ ಕಾರ್ಯಕ್ರಮ, ಮೆರವಣಿಗೆ‌ ಸೇರಿದಂತೆ ಎಲ್ಲ ಕಾರ್ಯಕ್ರಮಗಳು ವ್ಯವಸ್ಥಿತವಾಗಿ ನಡೆಯಬೇಕು. ಯಾವುದೇ ಲೋಪವಾಗದಂತೆ ಉಪ‌ ಸಮಿತಿಗಳು ನೋಡಿಕೊಂಡು, ತಮ್ಮ‌ ಜವಾಬ್ದಾರಿ ಅಚ್ಚುಕಟ್ಟಾಗಿ ನಿರ್ವಹಿಸಬೇಕು’ ಎಂದರು.

ಕಾಕತಿಯಲ್ಲೂ ತಯಾರಿ ಮಾಡಿಕೊಳ್ಳಿ: ‘ಕಿತ್ತೂರಿನ ಜತೆಗೆ, ಚನ್ನಮ್ಮನ ಜನ್ಮಸ್ಥಳವಾದ ಕಾಕತಿಯಲ್ಲೂ ಸಡಗರದ ಉತ್ಸವ ಆಚರಣೆಗೆ ಉಪ ಸಮಿತಿಗಳು ತಯಾರಿ ಮಾಡಿಕೊಳ್ಳಬೇಕು’ ಎಂದೂ ಹೇಳಿದರು.

ಪ್ರೊಬೇಷನರಿ ಐಎಎಸ್‌ ಅಧಿಕಾರಿ ರೋಹಿತ್ ಸಿಂಗ್, ಉಪವಿಭಾಗಾಧಿಕಾರಿಗಳಾದ ಪ್ರವೀಣ ಜೈನ, ಶ್ರವಣಕುಮಾರ ನಾಯಕ, ಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಾಜಶ್ರೀ ಜೈನಾಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಆಹಾರ ನಾಗರಿಕ‌ ಸರಬರಾಜು ಇಲಾಖೆ ಉಪನಿರ್ದೇಶಕ‌ ಮಲ್ಲಿಕಾರ್ಜುನ ನಾಯಕ ಇದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ