ಮೈಸೂರು | ಗೂಡ್ಸ್ ವಾಹನ ಡಿಕ್ಕಿ: ಯುವತಿ ಸಾವು

ಮೈಸೂರು | ಗೂಡ್ಸ್ ವಾಹನ ಡಿಕ್ಕಿ: ಯುವತಿ ಸಾವು

ಮೈಸೂರು | ಗೂಡ್ಸ್ ವಾಹನ ಡಿಕ್ಕಿ: ಯುವತಿ ಸಾವು

ಮೈಸೂರು: ಆರ್‌.ಟಿ. ನಗರ ಜಂಕ್ಷನ್ ಬಳಿ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಎಂ.ಜಿ. ರಮ್ಯಾ (22) ಮೃತಪಟ್ಟರು.

ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದ ನಿವಾಸಿ ರಮ್ಯಾ ಫಾರ್ಮಸಿ ವ್ಯಾಸಂಗ ಮುಗಿಸಿ ಕುವೆಂಪುನಗರದ ಕಂಪನಿಯೊಂದರಲ್ಲಿ ಫಾರ್ಮಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು.

ಅವರು ಭಾನುವಾರ ಮಧ್ಯಾಹ್ನ ಸ್ಕೂಟರ್‌ನಲ್ಲಿ ದಟ್ಟಗಳ್ಳಿಯ ಆದಿತ್ಯ ಸರ್ಕಲ್ ಕಡೆಯಿಂದ ಆರ್.ಟಿ.ನಗರದ ಕಡೆಗೆ ಹೋಗುತ್ತಿದ್ದಾಗ ಗೂಡ್ಸ್‌ ವಾಹನ ಡಿಕ್ಕಿಯಾಯಿತು. ತೀವ್ರವಾಗಿ ಗಾಯಗೊಂಡ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು.

ಸೋಮವಾರ ಕೆ.ಆರ್. ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಕೆ.ಆರ್. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ