ವಿದ್ಯಾರ್ಥಿಗಳು ಕ್ರೀಡಾಸ್ಫೂರ್ತಿ ಮೆರೆಯಿರಿ: ಡಿಡಿಪಿಐ ಆರ್.ಎಸ್. ಬುರಡಿ ಸಲಹೆ

ವಿದ್ಯಾರ್ಥಿಗಳು ಕ್ರೀಡಾಸ್ಫೂರ್ತಿ ಮೆರೆಯಿರಿ: ಡಿಡಿಪಿಐ ಆರ್.ಎಸ್. ಬುರಡಿ ಸಲಹೆ

ವಿದ್ಯಾರ್ಥಿಗಳು ಕ್ರೀಡಾಸ್ಫೂರ್ತಿ ಮೆರೆಯಿರಿ: ಡಿಡಿಪಿಐ ಆರ್.ಎಸ್. ಬುರಡಿ ಸಲಹೆ

ಗದಗ: ‘ಕ್ರೀಡಾಪಟುಗಳಿಗೆ ಸೋಲು–ಗೆಲುವಿಗಿಂತ ಕ್ರೀಡೆಯಲ್ಲಿ ಪಾಲ್ಗೊಳ್ಳುವುದೇ ಮುಖ್ಯವಾಗಬೇಕು’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಆರ್.ಎಸ್. ಬುರಡಿ ತಿಳಿಸಿದರು.

ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಭಾನುವಾರ ಆರಂಭವಾದ 2026–27ನೇ ಸಾಲಿನ 14–17 ವಯೋಮಾನದ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

‘ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆಗಳು ಪೂರಕವಾಗಿದ್ದು, ಶಿಸ್ತು, ಆತ್ಮವಿಶ್ವಾಸ, ಸಹನೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತವೆ. ಕುಸ್ತಿ ನಮ್ಮ ದೇಶದ ಸಾಂಪ್ರದಾಯಿಕ ಕ್ರೀಡೆಯಾಗಿದ್ದು, ಗ್ರಾಮೀಣ ಭಾಗದ ಕ್ರೀಡಾಪಟುಗಳ ಪ್ರತಿಭೆಯನ್ನು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಇಂತಹ ಪಂದ್ಯಾವಳಿಗಳು ಉತ್ತಮ ವೇದಿಕೆಯಾಗಿವೆ’ ಎಂದರು.

‘ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಬಾಲಕ–ಬಾಲಕಿಯರು ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು. ಗೆಲುವು ಮತ್ತು ಸೋಲನ್ನು ಸಮಾನವಾಗಿ ಸ್ವೀಕರಿಸಿ, ಕ್ರೀಡಾಸ್ಫೂರ್ತಿ, ಶಿಸ್ತು ಹಾಗೂ ಪರಸ್ಪರ ಗೌರವದೊಂದಿಗೆ ಸ್ಪರ್ಧಿಸಬೇಕು. ಕ್ರೀಡಾಪಟುಗಳು ತಮ್ಮ ಸಾಧನೆಯ ಮೂಲಕ ಜಿಲ್ಲೆ ಹಾಗೂ ರಾಜ್ಯಕ್ಕೆ ಕೀರ್ತಿ ತರುವಂತಾಗಬೇಕು’ ಎಂದು ಸಲಹೆ ನೀಡಿದರು.

‘ವಿದ್ಯಾರ್ಥಿಗಳಲ್ಲಿ ಕ್ರೀಡಾ ಆಸಕ್ತಿಯನ್ನು ಬೆಳೆಸುವ ಹಾಗೂ ಪ್ರತಿಭಾವಂತ ಕ್ರೀಡಾಪಟುಗಳಿಗೆ ಸೂಕ್ತ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ವಿವಿಧ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಕುಸ್ತಿ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ಮಾಡಲು ಅಗತ್ಯ ನೆರವು ನೀಡಲಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.

ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ರಾಜ್ಯ ಕುಸ್ತಿ ಸಂಘದ ಉಪಾಧ್ಯಕ್ಷ ವಿನೋದ ಕುಮಾರ, ಗದಗ ಕುಸ್ತಿ ಸಂಘದ ಅಧ್ಯಕ್ಷ ವಸಂತ ಸಿದ್ದಮ್ಮನಹಳ್ಳಿ, ವೈದ್ಯ ಪಿ.ಕೆ. ನೂರಾನಿ, ಡಿವೈಪಿಸಿ ಎಂ.ಎಚ್. ಕಂಬಳಿ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಎಸ್. ಡಿ. ಕನವಳ್ಳಿ, ಡಿವೈಪಿಸಿ ರವಿ ಪ್ರಕಾಶ, ಡಿಪಿಒ ಗಾಯಿತ್ರಿ ದೇವಿ ಎಂ., ಬಿಇಒ ವಿ.ವಿ ನಡುವಿನಮನಿ ಇದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ