ಬೆಳಗಾವಿ: ವಿಜಯಪುರದ ಲಿಂಗರಾಜ ಕಾಲೇಜಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ

ಬೆಳಗಾವಿ: ವಿಜಯಪುರದ ಲಿಂಗರಾಜ ಕಾಲೇಜಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ

ಬೆಳಗಾವಿ: ವಿಜಯಪುರದ ಲಿಂಗರಾಜ ಕಾಲೇಜಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ

ಬೆಳಗಾವಿ: ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಈಚೆಗೆ ನಡೆದ ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 10ನೇ ಅಂತರಕಾಲೇಜು ಅಥ್ಲೆಟಿಕ್ ಕೂಟದಲ್ಲಿ ಕೆಎಲ್‌ಇ ಸಂಸ್ಥೆಯ ಲಿಂಗರಾಜ ಕಾಲೇಜು ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆಯಿತು.

ಈ ಕಾಲೇಜಿನ ವಿದ್ಯಾರ್ಥಿಗಳು 19 ಚಿನ್ನ, ಒಂಬತ್ತು ಬೆಳ್ಳಿ ಹಾಗೂ ಮೂರು ಕಂಚಿನ ಪದಕ ಗೆದ್ದಿದ್ದು, ಮೂರು ಕೂಟ ದಾಖಲೆ ನಿರ್ಮಿಸಿದ್ದಾರೆ. ಮಹಿಳೆಯರ ವಿಭಾಗದಲ್ಲಿ ವೈಭವಿ ಬುಡ್ರುಕ್ ವೈಯಕ್ತಿಕ ವಿಭಾಗದ ಚಾಂಪಿಯನ್ ಆಗಿದ್ದಾರೆ. ಈ ಕಾಲೇಜು ಸತತ 10ನೇ ಬಾರಿ ಪಡೆದ ಗೌರವ ಇದಾಗಿದೆ.

ಪ್ರಾಚಾರ್ಯ ಎಚ್.ಎಸ್.ಮೇಲಿನಮನಿ, ದೈಹಿಕ ಶಿಕ್ಷಣ ನಿರ್ದೇಶಕ ಸಿ.ರಾಮರಾವ್, ತಂಡದ ವ್ಯವಸ್ಥಾಪಕ ವಿನಾಯಕ ವರುಟೆ, ಅನೂಪ್‌ಕುಮಾರ್ ಜಂಬೋಟಿ ಹಾಗೂ ಸುನೀತ್ ಮುಡಲಗಿ ಅವರು, ವಿಜೇತರನ್ನು ಅಭಿನಂದಿಸಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ