ಜಂತರ್ ಮಂತರ್‌: ತ್ರಿವರ್ಣ ಧ್ವಜ ಹಿಡಿದು ಬ್ಯಾರಿಕೇಡ್ ಹಾರಿದ CJP ನಾಯಕರು ವಶಕ್ಕೆ

ಜಂತರ್ ಮಂತರ್‌: ತ್ರಿವರ್ಣ ಧ್ವಜ ಹಿಡಿದು ಬ್ಯಾರಿಕೇಡ್ ಹಾರಿದ CJP ನಾಯಕರು ವಶಕ್ಕೆ

ಜಂತರ್ ಮಂತರ್‌: ತ್ರಿವರ್ಣ ಧ್ವಜ ಹಿಡಿದು ಬ್ಯಾರಿಕೇಡ್ ಹಾರಿದ CJP ನಾಯಕರು ವಶಕ್ಕೆ

ನವದೆಹಲಿ: ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಜಂತರ್ ಮಂತರ್ ಅನ್ನು ಕೇಂದ್ರ ಸರ್ಕಾರ ಕೈಬಿಟ್ಟ ಬೆನ್ನಲ್ಲೇ, ಬುಧವಾರ ಬೆಳಿಗ್ಗೆ ಪ್ರತಿಭಟನೆ ನಡೆಸಲು ಮುಂದಾಗಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಕ್ಷದ ಮುಖಂಡರಾದ ಅಶುತೋಷ್ ರಾಂಕಾ ಹಾಗೂ ಸೌರವ್ ದಾಸ್ ನೇತೃತ್ವದಲ್ಲಿ ಬುಧವಾರ ಬೆಳಿಗ್ಗೆ ಸಿಜೆಪಿ ಕಾರ್ಯಕರ್ತರು ಜಂತರ್ ಮಂತರ್‌ಗೆ ತೆರಳಿದ್ದರು.

ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ. ಈ ವಿಡಿಯೊದಲ್ಲಿ, ಕಾರ್ಯಕರ್ತರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಹಾರಿ ಜಂತರ್ ಮಂತರ್ ಆವರಣ ಪ್ರವೇಶಿಸಿ ತ್ರಿವರ್ಣ ಧ್ವಜ ಪ್ರದರ್ಶಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತಿಕ್ಕಾಟ ಉಂಟಾಗಿದೆ.

‘ಭಾರತ್ ಮಾತಾ ಕೀ ಜೈ’ ಹಾಗೂ ‘ಇಂಕ್ವಿಲಾಬ್ ಜಿಂದಾಬಾದ್’ ಘೋಷಣೆಗಳನ್ನು ಕೂಗಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ದೀಪ್ಕೆ, ನಮ್ಮ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿಗೆ ಟ್ಯಾಗ್ ಮಾಡಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ