
ದೆಹಲಿ ಪ್ರತಿಭಟನೆ LIVE: ಜಂತರ್ ಮಂತರ್‌ಗೆ ಪ್ರವೇಶಿಸಲು ಯತ್ನಿಸಿದ ಸಿಜೆಪಿ ನಾಯಕರು ವಶಕ್ಕೆ
ಇಡೀ ವ್ಯವಸ್ಥೆಗೆ ಹಾನಿ ಮಾಡುವುದೇ ವಿಪಕ್ಷಗಳ ಹುನ್ನಾರ: ದೆಹಲಿ ಸಿಎಂ ರೇಖಾ ಗುಪ್ತಾ
ಎಸ್‌ಐಆರ್:ರಾಹುಲ್ ಗಾಂಧಿ ಅರ್ಜಿಯಲ್ಲಿ 10 ಲೋಪಗಳನ್ನು ಗುರುತಿಸಿದ ಸುಪ್ರೀಂ ಕೋರ್ಟ್
ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಅಳಿಸಿ ಹಾಕಲಾಗಿದೆ ಹಾಗೂ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತಿತರರು ಸಲ್ಲಿಸಿರುವ ಅರ್ಜಿಯಲ್ಲಿ 10ಕ್ಕೂ ಹೆಚ್ಚು ಲೋಪಗಳನ್ನು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಗುರುತಿಸಿದೆ.
ಜಂತರ್ ಮಂತರ್ ಇನ್ಮುಂದೆ ಪ್ರತಿಭಟನಾ ಸ್ಥಳವಲ್ಲ
ದೆಹಲಿಯ ಜಂತರ್ ಮಂತರ್ ಇನ್ನು ಮುಂದೆ ಪ್ರತಿಭಟನಾ ಸ್ಥಳವಲ್ಲ; ಅದಕ್ಕಾಗಿಯೇ ಮೂರು ಹೊಸ ಸ್ಥಳಗಳನ್ನು ಗುರುತಿಸಲಾಗಿದೆ ಎಂದು ದೆಹಲಿ ಪೊಲೀಸರು ಅಧಿಕೃತ ಆದೇಶದಲ್ಲಿ ತಿಳಿಸಿದ್ದಾರೆ. ರಾಮಲೀಲಾ ಮೈದಾನ, ಬುರಾರಿ ಮೈದಾನ ಹಾಗೂ ಸಿಬಿಡಿ ಮೈದಾನವನ್ನು ಪ್ರತಿಭಟನಾ ಸ್ಥಳಗಳೆಂದು ಗುರುತಿಸಲಾಗಿದೆ.
ರಿಟ್ ಅರ್ಜಿ: ವಿಚಾರಣೆ ಇಂದು?
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತೃಣಮೂಲ ಕಾಂಗ್ರೆಸ್ ಸಂಸದ ಸೌಗತ ರಾಯ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ರಾಷ್ಟ್ರೀಯ ಜನತಾ ದಳ ನಾಯಕ ತೇಜಸ್ವಿ ಯಾದವ್, ಎನ್‌ಸಿಪಿ (ಶರದ್ ಪವಾರ್ ಬಣ) ನಾಯಕಿ ಸುಪ್ರಿಯಾ ಸುಳೆ, ಶಿವಸೇನಾ-ಯುಬಿಟಿ ನಾಯಕ ಸಂಜಯ್ ರಾವುತ್, ಸಿಪಿಐ ನಾಯಕ ಡಿ. ರಾಜಾ, ಜಾರ್ಖಂಡ್ ಮುಕ್ತಿ ಮೋರ್ಚಾ ಸಂಸದೆ ಮಹುವಾ ಮಾಜಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನಾಯಕ ಇ.ಟಿ. ಮೊಹಮ್ಮದ್ ಬಶೀರ್ ಒಟ್ಟಾಗಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಿಚಾರಣೆ ನಡೆಸುವ ಸಂಭವ ಇದೆ.
ಜ್ಞಾನೇಶ್ ಕುಮಾರ್‌ವಿರುದ್ಧ ಹೋರಾಟ ತೀವ್ರ: ಸುಪ್ರೀಂ ಕೋರ್ಟ್ ಅಂಗಳಕ್ಕೆ ‘ಇಂಡಿಯಾ’
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿರುವ ‘ಇಂಡಿಯಾ’ ಮೈತ್ರಿಕೂಟದ ನಾಯಕರು ಸೋಮವಾರ ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ. ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಶ್ನಿಸಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಜಂತರ್ ಮಂತರ್: ತ್ರಿವರ್ಣ ಧ್ವಜ ಹಿಡಿದು ಬ್ಯಾರಿಕೇಡ್ ಹಾರಿದ CJP ನಾಯಕರು ವಶಕ್ಕೆ
ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಜಂತರ್ ಮಂತರ್ ಅನ್ನು ಕೇಂದ್ರ ಸರ್ಕಾರ ಕೈಬಿಟ್ಟ ಬೆನ್ನಲ್ಲೇ, ಬುಧವಾರ ಬೆಳಿಗ್ಗೆ ಪ್ರತಿಭಟನೆ ನಡೆಸಲು ಮುಂದಾಗಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.