ಲಯಕ್ಕೆ ಮರಳಿದ ಸೂರ್ಯಕುಮಾರ್: 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ SKY

ಲಯಕ್ಕೆ ಮರಳಿದ ಸೂರ್ಯಕುಮಾರ್: 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ SKY

ಲಯಕ್ಕೆ ಮರಳಿದ ಸೂರ್ಯಕುಮಾರ್: 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ SKY

ಮುಂಬೈ: ಕಳಪೆ ಫಾರ್ಮ್‌ನಿಂದಾಗಿ ಟೀಕೆಗೆ ಗುರಿಯಾಗಿದ್ದ ಭಾರತ ಟಿ20 ತಂಡದ ಮಾಜಿ ನಾಯಕ ಸೂರ್ಯಕುಮಾರ್ ಯಾದವ್, ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನಸೆಳೆದಿದ್ದಾರೆ.

ಹೈದರಾಬಾದ್ ವಿರುದ್ಧ ಕೇವಲ 21 ಎಸೆತಗಳಲ್ಲಿ 6 ಬೌಂಡರಿ ಮತ್ತು 5 ಸಿಕ್ಸರ್ ಸಹಿತ ಅಜೇಯ 60 ರನ್ ಸಿಡಿಸುವ ಮೂಲಕ ಮುಂಬೈ ತಂಡಕ್ಕೆ ಏಳು ವಿಕೆಟ್‌ಗಳ ಗೆಲುವು ತಂದುಕೊಟ್ಟಿದ್ದಾರೆ.

ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ನಿಗದಿತ 20 ಓವರ್‌ಗಳಲ್ಲಿ 172 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನಟ್ಟಿದ ಮುಂಬೈ ಕೇವಲ 13.1 ಓವರ್‌ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 174 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಮುಂಬೈ ಪರ ಸೂರ್ಯಕುಮಾರ್ ಯಾದವ್ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಅವರು ಕೇವಲ 21 ಎಸೆತಗಳಲ್ಲಿ ಅಜೇಯ 60 ರನ್ ಸಿಡಿಸಿದರು. ವಿಶೇಷವಾಗಿ ಅವರು ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಇನ್ನೊಂದೆಡೆ, ಮುಶೀರ್ ಖಾನ್ ಕೂಡ ಸ್ಫೋಟಕ ಬ್ಯಾಟಿಂಗ್ ನಡೆಸಿ 24 ಎಸೆತಗಳಲ್ಲಿ 51 ರನ್ ಗಳಿಸಿದರು. ಇವರಿಬ್ಬರ ಭರ್ಜರಿ ಆಟದಿಂದ ಮುಂಬೈ ಸುಲಭವಾಗಿ ಗೆಲುವು ಸಾಧಿಸಿತು.

ಕಳೆದ ಟಿ20 ವಿಶ್ವಕಪ್‌ನಿಂದಲೂ ಲಯ ಕಳೆದುಕೊಂಡಿದ್ದ ಸೂರ್ಯಕುಮಾರ್ ಯಾದವ್ 2026ರ ಐಪಿಎಲ್‌ನಲ್ಲೂ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಪರಿಣಾಮ ಅವರು ಭಾರತ ಟಿ20 ತಂಡದಿಂದ ಹೊರಬಿದ್ದಿದ್ದರು.

ಇದೀಗ ನಡೆಯುತ್ತಿರುವ ಸೈಯದ್ ಮುಷ್ತಾಕ್ ಅಲಿ ಟೂರ್ನಿಯು ಅವರಿಗೆ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಲು ಉತ್ತಮ ವೇದಿಕೆಯಾಗಿದೆ. ಹೈದರಾಬಾದ್ ವಿರುದ್ಧದ ಸ್ಫೋಟಕ ಇನಿಂಗ್ಸ್ ಆಡುವ ಮೂಲಕ ಆಯ್ಕೆಗಾರರ ಗಮನ ಸೆಳೆಯುವಲ್ಲಿ ಅವರು ಯಶಸ್ವಿಯಾಗಿದ್ದಾರೆ.

  • ಹೈದರಾಬಾದ್: 20 ಓವರ್‌ಗಳಲ್ಲಿ 172 ರನ್‌ಗಳಿಗೆ ಆಲೌಟ್ (ಅಭಿರಥ್ ರೆಡ್ಡಿ 35, ಮ್ಯಾಕ್ಸ್‌ವೆಲ್ ಸ್ವಾಮಿನಾಥನ್ 3/23).

  • ಮುಂಬೈ: 13.1 ಓವರ್‌ಗಳಲ್ಲಿ 174/3 (ಸೂರ್ಯಕುಮಾರ್ ಯಾದವ್ 60*, ಮುಶೀರ್ ಖಾನ್ 51, ಅಜಯ್ ದೇವ್ ಗೌಡ್ 2/41).

ಹೈದರಾಬಾದ್: 20 ಓವರ್‌ಗಳಲ್ಲಿ 172 ರನ್‌ಗಳಿಗೆ ಆಲೌಟ್ (ಅಭಿರಥ್ ರೆಡ್ಡಿ 35, ಮ್ಯಾಕ್ಸ್‌ವೆಲ್ ಸ್ವಾಮಿನಾಥನ್ 3/23).

ಮುಂಬೈ: 13.1 ಓವರ್‌ಗಳಲ್ಲಿ 174/3 (ಸೂರ್ಯಕುಮಾರ್ ಯಾದವ್ 60*, ಮುಶೀರ್ ಖಾನ್ 51, ಅಜಯ್ ದೇವ್ ಗೌಡ್ 2/41).

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ