ನ.30ರಂದು ಮಂಗಳೂರಿನಲ್ಲಿ ವಿಭಾಗೀಯ ಮಟ್ಟದ ಉದ್ಯೋಗ ಮೇಳ

ನ.30ರಂದು ಮಂಗಳೂರಿನಲ್ಲಿ ವಿಭಾಗೀಯ ಮಟ್ಟದ ಉದ್ಯೋಗ ಮೇಳ

ನ.30ರಂದು ಮಂಗಳೂರಿನಲ್ಲಿ ವಿಭಾಗೀಯ ಮಟ್ಟದ ಉದ್ಯೋಗ ಮೇಳ

ಮಂಗಳೂರು: ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಇದೇ 30ರಂದು ನಗರದ ಸೇಂಟ್‌ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಪ್ರಾಂಗಣದಲ್ಲಿ ನಡೆಸಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್‌ ತಿಳಿಸಿದರು.

ಉದ್ಯೋಗ ಮೇಳದ ಪೂರ್ವತಯಾರಿಗಾಗಿ ಇಲ್ಲಿ ಬುಧವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.

‘ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ಹಮ್ಮಿಕೊಂಡ ಸಂದರ್ಭದಲ್ಲಿ ಈ ಪ್ರದೇಶದ ಜನರಿಗೆ ಹೆಚ್ಚಿನ ಉದ್ಯೋಗಾ ವಕಾಶ ಒದಗಿಸುವ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದರು. ಅದರಂತೆ ಕರ್ನಾಟಕ ಸರ್ಕಾರದ ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕೌಶಲ ಅಭಿವೃದ್ಧಿ ನಿಗಮದ ವತಿಯಿಂದ ಈ ಮೇಳವನ್ನು ಹಮ್ಮಿಕೊಳ್ಳಲಾಗುತ್ತಿದೆ. 250ಕ್ಕೂ ಹೆಚ್ಚಿನ ಉದ್ಯೋಗದಾತ ಸಂಸ್ಥೆಗಳು ಹಾಗೂ ದಕ್ಷಿಣ ಕನ್ನಡ ಜೊತೆಗೆ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಿಂದ 10ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದೆ’ ಎಂದರು.

‘ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹೆಸರು ನೋಂದಾಯಿಸಿರುವ 10,089 ಅಭ್ಯರ್ಥಿಗಳು, ಯುವನಿಧಿ ಯೋಜನೆಯ 8,708 ಫಲಾನುಭವಿಗಳು, ಯುವ ಉದ್ಯೋಗ ಸೇತು ಪೋರ್ಟಲ್‌ನಲ್ಲಿ ಉದ್ಯೋಗಕ್ಕಾಗಿ ನೋಂದಾಯಿಸಿರುವ ಆಕಾಂಕ್ಷಿಗಳು ಹಾಗೂ ಇತರು ಈ ಅವ ಕಾಶವನ್ನು ಬಳಸಿಕೊಳ್ಳಬಹುದು. ಜಿಲ್ಲೆಯಲ್ಲಿ 17 ಎಂಜಿನಿಯರಿಂಗ್ ಕಾಲೇಜುಗಳು, 11 ಪಾಲಿಟೆಕ್ನಿಕ್‌ಗಳು, ಸರ್ಕಾರಿ ಹಾಗೂ ಖಾಸಗಿ ಸೇರಿ 25 ಕೈಗಾರಿಕಾ ತರಬೇತಿ ಸಂಸ್ಥೆಗಳು, 115 ಪದವಿ ಕಾಲೇಜುಗಳು, 210 ಪದವಿ ಪೂರ್ವ ಕಾಲೇಜುಗಳು ಹಾಗೂ 611 ಪ್ರೌಢಶಾಲೆಗಳಿಂದ ಸರಿಸುಮಾರು 65 ಸಾವಿರ ವಿದ್ಯಾರ್ಥಿಗಳು ವ್ಯಾಸಂಗವನ್ನು ಪೂರ್ಣಗೊಳಿಸುತ್ತಾರೆ. ಅವರು ಉದ್ಯೋಗ ಪಡೆಯಲು ಇದು ಉತ್ತಮ ಅವಕಾಶ ಕಲ್ಪಿಸಲಿದೆ. ಕೌಶಲರಹಿತರೂ ಇದರ ಪ್ರಯೋಜನ ಪಡೆಯಬಹುದು’ ಎಂದರು.

‘ಉದ್ಯೋಗ ಮೇಳವನ್ನು ಮುಖ್ಯಮಂತ್ರಿ ಉದ್ಘಾಟಿಸುವರು. ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವರು, ರಾಜ್ಯ ಕೌಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಿವಕಾಂತಮ್ಮ ನಾಯಕ ಭಾಗವಹಿಸಲಿದ್ದಾರೆ’ ಎಂದರು.

‘ಎಲ್ಲ ಅಭ್ಯರ್ಥಿಗಳಿಗೆ ಉಪಹಾರ ಹಾಗೂ ಊಟವನ್ನು ಉಚಿತವಾಗಿ ಒದಗಿಸಲಾಗುತ್ತದೆ. ವಾಹನ ನಿಲುಗಡೆಗೆ ಸೇಂಟ್‌ ಅಲೋಷಿಯಸ್ ಪದವು ಪೂರ್ವ ಕಾಲೇಜಿನ ಬಳಿಯ ಮೈದಾನದಲ್ಲಿ, ಬಾವುಟಗುಡ್ಡೆಯಲ್ಲಿ ಹಾಗೂ ನೆಹರೂ ಮೈದಾನದಲ್ಲಿ ಅವಕಾಶ ಕಲ್ಪಿಸುತ್ತೇವೆ. ನೆಹರೂ ಮೈದಾನದಿಂದ ಅಭ್ಯರ್ಥಿಗಳನ್ನು ಕರೆದೊಯ್ಯುವ ವ್ಯವಸ್ಥೆ ಇದೆ. ಉದ್ಯೋಗ ಆಕಾಂಕ್ಷಿಗಳು ಹಾಗೂ ಉದ್ಯೋಗದಾತರು https://yuvaudyogasethu.karnataka.gov.in ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಬೇಕು’ ಎಂದರು.

ಇದೇ 25ರಂದು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಪ್ರದೀಪ್‌ ಡಿಸೋಜ, ಪ್ರೊಬೇಷನರಿ ಐಎಎಸ್‌ ಅಧಿಕಾರಿ ಅರ್ಚಿತ್ ಡೊಂಗ್ರೆ ಭಾಗವಹಿಸಿದ್ದರು.

ಮನೆಯಲ್ಲಿ ಬಳಸಿದ ಅಡುಗೆ ಎಣ್ಣೆ ಖರೀದಿಗೂ ವ್ಯವಸ್ಥೆ: ಸಚಿವ ಖಾದರ್

‘ಹೋಟೆಲ್‌, ರೆಸ್ಟೋರಂಟ್‌ ಖಾದ್ಯ ತಯಾರಿ ಸಂಸ್ಥೆಗಳು ಒಮ್ಮೆ ಬಳಸಿದ ಅಡುಗೆ ಎಣ್ಣೆಯನ್ನು ಸಂಗ್ರಹಿಸಿ ಬಯೋಡೀಸೆಲ್‌, ವೈಮಾನಿಕ ಇಂಧನ, ಸಾಬೂನು ತಯಾರಿ ಮೊದಲಾದ ಉದ್ದೇಶಗಳಿಗೆ ಉಪಯೋಗಿಸಲು ನೆರವಾಗುವ ಉದ್ದೇಶದಿಂದ ಆ್ಯಪ್ ಅಭಿವೃದ್ಧಿಪಡಿಸಲಾಗುತ್ತಿದೆ. ಮನೆಯಲ್ಲಿ ಬಳಸಿದ ಅಡುಗೆ ಎಣ್ಣೆಯನ್ನೂ ಇಂತಹ ಸಂಸ್ಥೆಗಳಿಗೆ ಮಾರಾಟ ಮಾಡುವುದಕ್ಕೂ ಮುಂದಿನ ಹಂತದಲ್ಲಿ ಅವಕಾಶ ಮಾಡಿಕೊಡಲಿದ್ದೇವೆ’ ಎಂದು ಸಚಿವ ಯು.ಟಿ.ಖಾದರ್ ತಿಳಿಸಿದರು.

‘ಮಂಗಳೂರು, ಮೈಸೂರು, ಬೆಂಗಳೂರು, ಹುಬ್ಬಳ್ಳಿ ನಗರಗಳಲ್ಲಿ ಇದನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಿ ಕ್ರಮೇಣ ಇತರ ಕಡೆಗೂ ವಿಸ್ತರಿಸುತ್ತೇವೆ. ಬಳಸಿದ ಅಡುಗೆ ಎಣ್ಣೆಯನ್ನು ಖರೀದಿಸುವ ಸಂಸ್ಥೆಗಳ ವಿವರ ಈ ಆ್ಯಪ್‌ನಲ್ಲಿ ಲಭ್ಯ. ಕನಿಷ್ಠ ದರವನ್ನು ಸರ್ಕಾರವೇ ನಿಗದಿಪಡಿಸಲಿದೆ. ಬಳಸಿದ ಅಡುಗೆ ಎಣ್ಣೆಯನ್ನು ಹೆಚ್ಚು ದರ ನೀಡುವ ಸಂಸ್ಥೆಗೆ ಮಾರಾಟ ಮಾಡುವ ಅವಕಾಶ ಮುಕ್ತವಾಗಿರುತ್ತದೆ’ ಎಂದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ