ಶಿರಸಿ | 6,802 ಹೆಕ್ಟೇರ್ ಭತ್ತ ಕ್ಷೇತ್ರಕ್ಕೆ ಪರಿಹಾರ: ಮಧುಕರ ನಾಯ್ಕ

ಶಿರಸಿ | 6,802 ಹೆಕ್ಟೇರ್ ಭತ್ತ ಕ್ಷೇತ್ರಕ್ಕೆ ಪರಿಹಾರ: ಮಧುಕರ ನಾಯ್ಕ

ಶಿರಸಿ | 6,802 ಹೆಕ್ಟೇರ್ ಭತ್ತ ಕ್ಷೇತ್ರಕ್ಕೆ ಪರಿಹಾರ: ಮಧುಕರ ನಾಯ್ಕ

ಶಿರಸಿ: ‘ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳುಗಳಲ್ಲಿ ಶೇಕಡ 70ಕ್ಕಿಂತ ಅಧಿಕ ಮಳೆ ಕೊರತೆಯಾಗಿದ್ದು, ತಾಲ್ಲೂಕಿನಲ್ಲಿ ಭತ್ತದ ತೆನೆಗೆ ಹಾಲು ತುಂಬುವ ಹಂತದಲ್ಲಿ ತೀವ್ರ ನೀರಿನ ಅಭಾವ ಉಂಟಾಗಿ ನಷ್ಟವಾಗಿದೆ. ಈ ಹಿನ್ನೆಲೆ ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಪ್ರತಿ ಎಕರೆಗೆ ₹2,500 ಪರಿಹಾರವನ್ನು 6,802 ಹೆಕ್ಟೇರ್ ಭತ್ತದ ಬೆಳೆಗೆ ಡಿಬಿಟಿ ಮೂಲಕ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಧುಕರ ನಾಯ್ಕ ತಿಳಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಮಾಸಿಕ ಕೆಡಿಪಿಯಲ್ಲಿ ಇಲಾಖೆ ಕುರಿತು ಮಾಹಿತಿ ನೀಡಿದರು. ‌‌

‘ಕೃಷಿ ಇಲಾಖೆ ವ್ಯಾಪ್ತಿಯಲ್ಲಿ ಶೇಕಡ 95.4ರಷ್ಟು ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು, ಜಿಪಿಎಸ್ ಮಿಸ್‌ಮ್ಯಾಚ್ ಕಾರಣಕ್ಕೆ ಬಾಕಿ ಉಳಿದಿರುವ 300 ಪ್ಲಾಟ್‌ಗಳ ಸಮಸ್ಯೆ ಶೀಘ್ರ ಇತ್ಯರ್ಥಪಡಿಸಲಾಗುವುದು. ತಾಲ್ಲೂಕಿನಲ್ಲಿ ಯೂರಿಯಾ ಸೇರಿದಂತೆ ರಸಗೊಬ್ಬರದ ಕೊರತೆ ಇಲ್ಲ. ಕೃಷಿ ಯಾಂತ್ರೀಕರಣ ಯೋಜನೆಯಡಿ 34 ರೈತರಿಗೆ ಪವರ್ ಟಿಲ್ಲರ್, 11 ರೈತರಿಗೆ ಸ್ಪ್ರೇಯರ್, ರೋಟವೇಟರ್ ಹಾಗೂ 23 ರೈತರಿಗೆ ಕೃಷಿ ಹೊಂಡ ಸೌಲಭ್ಯ ಒದಗಿಸಲಾಗಿದೆ. ಕೃಷಿ ಕೆಲಸದ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟ 17 ವರ್ಷದ ಯುವಕನ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಸರ್ಕಾರದಿಂದ ಸ್ಪಷ್ಟನೆ ಕೋರಲಾಗಿದೆ’ ಎಂದರು. 

ಸಿಡಿಪಿಒ ನಂದಕುಮಾರ ಆರ್. ಮಾತನಾಡಿ, ‘ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗುತ್ತಿದೆ. ಪೂರಕ ಪೌಷ್ಟಿಕ ಆಹಾರ ಯೋಜನೆ ಹಾಗೂ ಸಿಬ್ಬಂದಿ ಗೌರವಧನ ವೆಚ್ಚ ಸಂಪೂರ್ಣ ವಿನಿಯೋಗವಾಗಿದೆ. ನವೆಂಬರ್‌ನಿಂದ ಜನವರಿ ಅವಧಿಯಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಮಕ್ಕಳ ಮತ್ತು ಮಹಿಳಾ ಗ್ರಾಮಸಭೆಗಳನ್ನು ಆಯೋಜಿಸಲಾಗುವುದು’ ಎಂದು ತಿಳಿಸಿದರು. 

‘ತೋಟಗಾರಿಕೆ ಇಲಾಖೆಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬಿಡುಗಡೆಯಾದ ಅನುದಾನ ಸಂಪೂರ್ಣ ಖರ್ಚಾಗಿದ್ದು, ಹನಿ ನೀರಾವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ತಲಾ ₹1,500 ಸಹಾಯಧನ ನೀಡಲಾಗುತ್ತಿದೆ’ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿ ಸತೀಶ ಹೆಗಡೆ ಹೇಳಿದರು. 

ಗ್ರಾಮೀಣ ಕುಡಿಯುವ ನೀರು ಇಲಾಖೆಯ ಅಧಿಕಾರಿ ಆಶಾ ಮಾತನಾಡಿ, ‘ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದಿಂದ ಕೈಗೆತ್ತಿಕೊಳ್ಳಲಾದ ಬ್ಯಾಚ್ 1, 2 ಮತ್ತು 4ರ ಕುಡಿಯುವ ನೀರು ಹಾಗೂ ಮೂಲಸೌಕರ್ಯ ಕಾಮಗಾರಿಗಳ ಪೈಕಿ ಹೆಚ್ಚಿನ ಕೆಲಸಗಳು ಪೂರ್ಣಗೊಂಡಿದ್ದು, ಅನುದಾನ ಕೊರತೆ ಇರುವ ಕಾಮಗಾರಿಗಳನ್ನು ಹಣ ಬಿಡುಗಡೆಯಾದ ತಕ್ಷಣ ಪುನರಾರಂಭಿಸಲಾಗುವುದು’ ಎಂದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆಯ  ಪೈಪ್‌ಲೈನ್ ಕಾಮಗಾರಿಗಾಗಿ ಅಗೆಯಲಾದ ರಸ್ತೆಗಳನ್ನು ಶೀಘ್ರ ದುರಸ್ತಿಗೊಳಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಯಿತು. ತಾಲ್ಲೂಕು ಪಂಚಾಯಿತಿ ಇಒ ಚನ್ನಬಸಪ್ಪ ಹಾವಣಗಿ ಇದ್ದರು. 

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ