ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮಗದೊಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮಗದೊಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮಗದೊಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆ

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ನವೆಂಬರ್ 17ರ ವೇಳೆಗೆ ಚಂಡಮಾರುತವಾಗಿ ರೂಪಾಂತರಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಚಂಡಮಾರುತದ ಪ್ರಭಾವದಿಂದ ತಮಿಳುನಾಡಿನ ಉತ್ತರ ಕರಾವಳಿ, ಪುದುಚೇರಿ ಮತ್ತು ಕಾರೈಕಲ್ ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಐಎಂಡಿ ತಿಳಿಸಿದೆ.

ಬಂಗಾಳ ಕೊಲ್ಲಿಯ ಆಗ್ನೇಯ ದಿಕ್ಕಿನಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಭಾನುವಾರ ಮತ್ತಷ್ಟು ತೀವ್ರಗೊಳ್ಳಲಿದ್ದು, ವಾಯುವ್ಯ ದಿಕ್ಕಿನತ್ತ ಚಲಿಸಲಿದೆ. ನವೆಂಬರ್ 16ರಂದು ದಕ್ಷಿಣ ಮತ್ತು ಅದಕ್ಕೆ ಹೊಂದಿರುವ ಪಶ್ಚಿಮ–ಮಧ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವಾಗಿ ರೂಪಾಂತರಗೊಳ್ಳುವ ಸಂಭವ ಇದೆ.

ನವೆಂಬರ್ 17ರಂದು ತೀವ್ರ ಚಂಡಮಾರುತವಾಗಿ ರೂಪಾಂತರಗೊಳ್ಳಲುವ ಸಾಧ್ಯತೆ ಇದೆ. ಇದರಿಂದಾಗಿ ತಮಿಳುನಾಡಿನಲ್ಲೂ ಮಳೆಯಾಗಲಿದೆ.

ಹವಾಮಾನ ಇಲಾಖೆಯ ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಗಳ ಅವಧಿಯಲ್ಲಿ ಚೆಂಗಲ್‌ಪಟ್ಟು, ಚೆನ್ನೈ, ಕಾಂಚೀಪುರಂ ಹಾಗೂ ಕನ್ಯಾಕುಮಾರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ