ಬೆಳ್ತಂಗಡಿ: ಗೂಡ್ಸ್ ಟೆಂಪೊ ಡಿಕ್ಕಿ, ಇಬ್ಬರು ಸವಾರರು ಸಾವು

ಬೆಳ್ತಂಗಡಿ: ಗೂಡ್ಸ್ ಟೆಂಪೊ ಡಿಕ್ಕಿ, ಇಬ್ಬರು ಸವಾರರು ಸಾವು

ಬೆಳ್ತಂಗಡಿ: ಗೂಡ್ಸ್ ಟೆಂಪೊ ಡಿಕ್ಕಿ, ಇಬ್ಬರು ಸವಾರರು ಸಾವು

ಬೆಳ್ತಂಗಡಿ: ಇಲ್ಲಿನ ಚರ್ಚ್ ರೋಡ್ ಬಳಿ ಗೂಡ್ಸ್ ಟೆಂಪೊ ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ದ್ವಿಚಕ್ರ ವಾಹನ ಸವಾರರು ಮೃತಪಟ್ಟಿದ್ದಾರೆ.

ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಬೆಳ್ತಂಗಡಿ ತಾಲ್ಲೂಕಿನ ನಾವೂರಿನ ಸಂತೋಷ್ (32) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಂದು ಬೈಕ್‌ನ ಸವಾರ ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಮೋಹನ್ (33) ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಮಂಗಳೂರಿನಿಂದ ಚಿಕ್ಕಮಗಳೂರು ಕಡೆ ಹೋಗುತ್ತಿದ್ದ ಟಾಟಾ ಗೂಡ್ಸ್ ವಾಹನ ಸವಾರನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಮೃತ ಸಂತೋಷ್ ಮಂಗಳೂರಿನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದು, ಮೋಹನ್ ಪಿಲಿಗೂಡುವಿನ ಯೋಗದೀಪ್ ಪ್ರಿಂಟಿಂಗ್ ಪ್ರೆಸ್‌ನ ಮಾಲೀಕರಾಗಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ