ಬಿಜೆಪಿಯ ಅಂತ್ಯ ಸನ್ನಿಹಿತವಾಗಿದೆ: ಪದ್ಮರಾಜ್‌ ಆರ್‌. ಪೂಜಾರಿ

ಬಿಜೆಪಿಯ ಅಂತ್ಯ ಸನ್ನಿಹಿತವಾಗಿದೆ: ಪದ್ಮರಾಜ್‌ ಆರ್‌. ಪೂಜಾರಿ

ಬಿಜೆಪಿಯ ಅಂತ್ಯ ಸನ್ನಿಹಿತವಾಗಿದೆ: ಪದ್ಮರಾಜ್‌ ಆರ್‌. ಪೂಜಾರಿ

ಮಂಗಳೂರು: ‘ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯವರು ಅಪಪ್ರಚಾರ ಮಾಡುತ್ತ ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಕೇಂದ್ರ ಸರ್ಕಾರದ ದುರಾಡಳಿತದ ವಿರುದ್ಧ ಯುವಜನರೂ ಬೀದಿಗಿಳಿದು ಹೋರಾಟ ನಡೆಸುತ್ತಿದ್ದು, ಬಿಜೆಪಿಯ ಅಂತ್ಯ ಸನ್ನಿಹಿತವಾಗಿದೆ’ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪದ್ಮರಾಜ್‌ ಆರ್‌. ಪೂಜಾರಿ ಹೇಳಿದರು.

ಬುಧವಾರ ಇಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಇಂಧನ ದರವನ್ನು ಗಣನೀಯವಾಗಿ ಹೆಚ್ಚಿಸಿದ್ದರಿಂದ ಅನಿವಾರ್ಯವಾಗಿ ಬಸ್‌ ಪ್ರಯಾಣ ದರವನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ’ ಎಂದರು.

‘ರೈತರ ನೆರವಿಗೆ ಬರಲಿಕ್ಕಾಗಿ ವಿಧಾನ ಮಂಡಲದಲ್ಲಿ ಚರ್ಚೆ ನಡೆಸಿ ಹಾಲಿನ ದರ ಹೆಚ್ಚಳ ಮಾಡಲಾಗಿದೆ. ಅಧಿವೇಶನದಲ್ಲಿ ಒಪ್ಪಿಗೆ ಸೂಚಿಸಿದ್ದ ಬಿಜೆಪಿಯ ಶಾಸಕರು ಈಗ ಇದರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ರೈತರಿಗೆ ಹೆಚ್ಚುವರಿ ಹಣ ಕೊಡುವುದು ಬೇಡ ಎಂದು ಅವರು ಹೇಳಲಿ’ ಎಂದು ಸವಾಲು ಹಾಕಿದರು.

‌ಹಾಲು ಮತ್ತು ಬಸ್‌ ಪ್ರಯಾಣ ದರ ಹೆಚ್ಚಳ ವಿಷಯ ಮುಂದಿಟ್ಟುಕೊಂಡು ಜನರನ್ನು ತಪ್ಪುದಾರಿಗೆ ಎಳೆಯುತ್ತಿರುವ ಬಿಜೆಪಿಯವರ ವಿರುದ್ಧ ಜಿಲ್ಲೆಯ ಎಲ್ಲ ಬ್ಲಾಕ್‌ ಕಾಂಗ್ರೆಸ್‌ನಿಂದ ಮಾಧ್ಯಮಗೋಷ್ಠಿ ನಡೆಸಿ ಜನಜಾಗೃತಿ ಮೂಡಿಸಲಾಗುವುದು. ಗ್ರಾಮ ಮಟ್ಟದಲ್ಲಿಯೂ ಜಾಗೃತಿ ಮೂಡಿಸುತ್ತೇವೆ ಎಂದರು.

ಕೇಂದ್ರ ಸರ್ಕಾರ ಜಿಎಸ್‌ಟಿಯಲ್ಲಿ ರಾಜ್ಯಕ್ಕೆ ಕೊಡಬೇಕಾಗಿರುವ ಪಾಲನ್ನು ಕೊಟ್ಟರೆ, ಪೆಟ್ರೋಲ್‌–ಡೀಸೆಲ್‌ ಮೇಲಿನ ತೆರಿಗೆ ಕಡಿಮೆ ಮಾಡಲು ರಾಜ್ಯ ಸರ್ಕಾರ ಸಿದ್ಧ ಎಂದೂ ಅವರು ಪ್ರತಿಕ್ರಿಯಿಸಿದರು.

ಕಾಂಗ್ರೆಸ್‌ ಪದಾಧಿಕಾರಿಗಳಾದ ಅಪ್ಪಿ, ಸಲೀಂ, ನೀರಜ್‌, ಟಿ.ಕೆ. ಸುಧೀರ್‌, ಉದಯ್‌ ಕುಂದರ್‌, ನಜೀರ್‌, ಪ್ರಕಾಶ್‌ ಮಾಧ್ಯಮಗೋಷ್ಠಿಯಲ್ಲಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ