ಶಿರಹಟ್ಟಿ | ಸ್ವಂತ ಸೂರಿಲ್ಲದ ಮೌಲಾನಾ ಆಜಾದ್ ಮಾದರಿ ಶಾಲೆ

ಶಿರಹಟ್ಟಿ | ಸ್ವಂತ ಸೂರಿಲ್ಲದ ಮೌಲಾನಾ ಆಜಾದ್ ಮಾದರಿ ಶಾಲೆ

ಶಿರಹಟ್ಟಿ | ಸ್ವಂತ ಸೂರಿಲ್ಲದ ಮೌಲಾನಾ ಆಜಾದ್ ಮಾದರಿ ಶಾಲೆ

ಶಿರಹಟ್ಟಿ: ಅಲ್ಪಸಂಖ್ಯಾತ ಸಮುದಾಯದವರು ಹಾಗೂ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಲೆಂದು ಸ್ಥಾಪಿಸಿರುವ ಇಲ್ಲಿನ ಮೌಲಾನಾ ಆಜಾದ್ ಮಾದರಿ ಶಾಲೆಯು ಸ್ವಂತ ಸೂರಿಲ್ಲದೆ ಸೊರಗಿದೆ.

ಪಟ್ಟಣದ ಹೊರವಲಯದಲ್ಲಿ ಮೌಲಾನಾ ಅಜಾದ್‌ ಶಾಲೆಗಾಗಿ ಡಾಲಾಯತ್ ಕುಟುಂಬದವರು ಭೂಮಿ ದಾನ ನೀಡಿದ್ದರು. ನಾಲ್ಕು ವರ್ಷಗಳ ಹಿಂದೆ ನಿರ್ಮಿತಿ ಕೇಂದ್ರದ ಮೂಲಕ ನಾಲ್ಕು ಕೊಠಡಿಗಳನ್ನು ನಿರ್ಮಿಸಲಾಗಿದೆ. ಆದರೆ, ಕೊಠಡಿಗಳನ್ನು ಹಸ್ತಾಂತರ ಮಾಡಲಾಗಿದೆಯೋ, ಇಲ್ಲವೋ ಎಂಬ ಮಾಹಿತಿಯು ಶಾಲೆಯ ಮುಖ್ಯಶಿಕ್ಷರಿಗೇ ಇಲ್ಲ. ಈ ಕೊಠಡಿಗಳು ತೀರಾ ಚಿಕ್ಕದಾಗಿದ್ದರಿಂದ ತರಗತಿ ನಡೆಸಲು ಕಷ್ಟ ಎಂಬ ಕಾರಣ ಹೇಳಿ, ಇವುಗಳನ್ನು ನಿರುಪಯುಕ್ತಗೊಳಿಸಲಾಗಿದೆ.

ಇದೇ ಆವರಣದಲ್ಲಿ ಸುಮಾರು ₹5 ಕೋಟಿ ವೆಚ್ಚದಲ್ಲಿ ಹೊಸದಾಗಿ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಹೀಗಾಗಿ, ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಈ ಹಿಂದೆ ನಿರ್ಮಿಸಿದ್ದ ಕೊಠಡಿಗಳು ಈಗ ಗೋದಾಮುಗಳಾಗಿ ಮಾರ್ಪಟ್ಟಿವೆ. ಹೊಸ ಕಟ್ಟಡಕ್ಕೆ ಬೇಕಾಗುವ ಸಿಮೆಂಟ್ ಚೀಲಗಳು, ಕಬ್ಬಿಣದ ಸರಳುಗಳನ್ನು ಇಲ್ಲಿ ಇಡಲಾಗಿದ್ದು, ಕಟ್ಟಡ ನಿರ್ಮಾಣ ಕಾರ್ಮಿಕರ ವಾಸ್ತವ್ಯಕ್ಕೂ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಎಲ್ಲ ಕಾರಣದಿಂದ ಮೌಲಾನಾ ಆಜಾದ್‌ ಶಾಲೆಯ ಎಲ್. ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳನ್ನು ಬಾಡಿಗೆ ಕಟ್ಟಡದಲ್ಲಿ ಹಾಗೂ 6ರಿಂದ 10ನೇ ತರಗತಿವರೆಗಿನ ತರಗತಿಗಳನ್ನು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಹೆಚ್ಚುವರಿ ಕೊಠಡಿಗಳಲ್ಲಿ ನಡೆಸಲಾಗುತ್ತಿದೆ. ಇಕ್ಕಟ್ಟಾದ ಕೊಠಡಿಯಲ್ಲಿ ಗಾಳಿ–ಬೆಳಕು ಇಲ್ಲ. ಶೌಚಾಲಯ, ಆಟದ ಮೈದಾನವೂ ಇಲ್ಲ. ಇದು ಮಕ್ಕಳ ಶೈಕ್ಷಣಿಕ ಪ್ರಗತಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂಬುದು ಪೋಷಕರ ಆರೋಪವಾಗಿದೆ.

ಪ್ರಾರಂಭದಲ್ಲಿ 6ರಿಂದ 10ನೇ ತರಗತಿಯವರೆಗೆ ಮಾತ್ರ ಪ್ರವೇಶಾತಿಗೆ ಅವಕಾಶವಿತ್ತು. ಎರಡು ವರ್ಷಗಳಿಂದ ಎಲ್.ಕೆ.ಜಿ, ಯು.ಕೆ.ಜಿ ತರಗತಿಗಳನ್ನು ಆರಂಭಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಅದಕ್ಕೆ ತಕ್ಕಂತೆ ಮೂಲಸೌಕರ್ಯ ಸೌಕರ್ಯ ಕಲ್ಪಿಸುವಲ್ಲಿ ಸರ್ಕಾರದ ಇಲಾಖೆಗಳು ವಿಫಲವಾಗಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಮೌಲಾನಾ ಆಜಾದ್ ಶಾಲಾ ಮಕ್ಕಳ ಸಂಖ್ಯೆ

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ