ಅಮೆರಿಕದಲ್ಲಿ ಭಾರತೀಯ ಸರಕುಗಳಿಗೆ ಆದ್ಯತೆಯ ಮಾರುಕಟ್ಟೆ ಪ್ರವೇಶ: ಗೋಯಲ್

ಅಮೆರಿಕದಲ್ಲಿ ಭಾರತೀಯ ಸರಕುಗಳಿಗೆ ಆದ್ಯತೆಯ ಮಾರುಕಟ್ಟೆ ಪ್ರವೇಶ: ಗೋಯಲ್

ಅಮೆರಿಕದಲ್ಲಿ ಭಾರತೀಯ ಸರಕುಗಳಿಗೆ ಆದ್ಯತೆಯ ಮಾರುಕಟ್ಟೆ ಪ್ರವೇಶ: ಗೋಯಲ್

ಕೈರೊ: ಅಮೆರಿಕದ ಮಾರುಕಟ್ಟೆಯಲ್ಲಿ ಬೇರೆ ರಾಷ್ಟ್ರಗಳಿಗಿಂತ ಕಡಿಮೆ ಸುಂಕದೊಂದಿಗೆ ಭಾರತೀಯ ಸರಕುಗಳಿಗೆ ಆದ್ಯತೆಯ ಮಾರುಕಟ್ಟೆ ಪ್ರವೇಶ ಕಲ್ಪಿಸಲು ಭಾರತ ಮತ್ತು ಅಮೆರಿಕ ಒಪ್ಪಿಕೊಂಡಿವೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಭಾನುವಾರ(ನ.15) ತಿಳಿಸಿದ್ದಾರೆ.

ಭಾರತ ಮತ್ತು ಈಜಿಪ್ಟ್ ನಡುವಿನ ವ್ಯಾಪಾರ ಹಾಗೂ ಹೂಡಿಕೆಯನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲು ಗೋಯಲ್ ಎರಡು ದಿನಗಳ ಭೇಟಿಗಾಗಿ ಕೈರೊಗೆ ತೆರಳಿದ್ದಾರೆ.

“ಕೆಲವು ತಿಂಗಳ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ವ್ಯಾಪಾರ ಒಪ್ಪಂದಕ್ಕೆ ಒಪ್ಪಿಗೆ ಸೂಚಿಸಿರುವುದಾಗಿ ಘೋಷಿಸಿದಾಗಲೇ, ಈ ಕುರಿತು ಉಭಯ ನಾಯಕರ ನಡುವೆ ಒಮ್ಮತ ಮೂಡಿತ್ತು. ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಡಿಮೆ ಸುಂಕದೊಂದಿಗೆ ಭಾರತಕ್ಕೆ ಅಮೆರಿಕದ ಮಾರುಕಟ್ಟೆಯಲ್ಲಿ ಆದ್ಯತೆಯ ವ್ಯಾಪಾರ ಪ್ರವೇಶ ದೊರೆಯಲಿದೆ ಎಂಬುದನ್ನು ಒಪ್ಪಿಕೊಳ್ಳಲಾಗಿದೆ” ಎಂದು ಗೋಯಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭಾರತ ಮತ್ತು ಅಮೆರಿಕ ಕಳೆದ ಫೆಬ್ರುವರಿಯಲ್ಲಿ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಮೊದಲ ಹಂತವನ್ನು ಅಂತಿಮಗೊಳಿಸಿದ್ದವು. ಈ ಒಪ್ಪಂದಕ್ಕೆ ಈಗಾಗಲೇ ಸಹಿ ಹಾಕಬೇಕಿತ್ತು. ಆದರೆ, ಅಮೆರಿಕದ ಸುಂಕ ನೀತಿಗಳಲ್ಲಿನ ಬದಲಾವಣೆಗಳಿಂದಾಗಿ ಒಪ್ಪಂದದ ಕುರಿತು ಹೆಚ್ಚಿನ ಮಾತುಕತೆಗಳು ಮುಂದುವರಿದಿವೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ