ಬರದ್ವಾಡದಲ್ಲಿ ಮೂಲಸೌಕರ್ಯ ಮರೀಚಿಕೆ, ಗ್ರಾಮಸ್ಥರ ಆಕ್ರೋಶ

ಬರದ್ವಾಡದಲ್ಲಿ ಮೂಲಸೌಕರ್ಯ ಮರೀಚಿಕೆ, ಗ್ರಾಮಸ್ಥರ ಆಕ್ರೋಶ

ಬರದ್ವಾಡದಲ್ಲಿ ಮೂಲಸೌಕರ್ಯ ಮರೀಚಿಕೆ, ಗ್ರಾಮಸ್ಥರ ಆಕ್ರೋಶ

ಬರದ್ವಾಡ (ಗುಡಗೇರಿ): ಕುಂದಗೋಳ ತಾಲ್ಲೂಕಿನ ಬರದ್ವಾಡವು ಗ್ರಾಮ ಪಂಚಾಯಿತಿ ಕೇಂದ್ರವಾಗಿದ್ದರೂ ಗ್ರಾಮದಲ್ಲಿ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲಸೌಕರ್ಯಗಳು ಮರೀಚಿಕೆಯಾಗಿವೆ.

ಗ್ರಾಮದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತದೆ. ಅಲ್ಲದೆ, ರಸ್ತೆಗಳೂ ಹದಗೆಟ್ಟಿವೆ. ಇದರಿಂದ ವಾಹನ ಸವಾರರು, ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಮಾಡಿದ್ದರೂ, ಎರಡು-ಮೂರು ದಿನಕ್ಕೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಇಡೀ ಗ್ರಾಮಕ್ಕೆ ಒಂದೇ ಕೊಳವೆಬಾವಿ ಇದ್ದು, ಅದು ಕೆಟ್ಟು ಹೋದರೆ ನೀರಿಗೆ ಹಾಹಾಕಾರ ಉಂಟಾಗುತ್ತದೆ. ಕೂಡಲೆ ಇನ್ನೆರಡು ಕೊಳವೆಬಾವಿ ಕೊರೆಯಿಸಬೇಕು ಎಂದು ಗ್ರಾಮದ ನಿವಾಸಿ ಕೆ.ಪರಶುರಾಮ್ ಒತ್ತಾಯಿಸಿದರು.

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥಾಲಯ ತೆರೆಯಬೇಕು ಎಂಬ ನಿಯಮವಿದ್ದರೂ, ಇಲ್ಲಿ ಗ್ರಂಥಾಲಯ ಇಲ್ಲ. ಇದರಿಂದ ವಿದ್ಯಾರ್ಥಿಗಳು, ಸಾಹಿತ್ಯಾಸಕ್ತರಿಗೆ ತೊಂದರೆಯಾಗುತ್ತಿದೆ.

ಸ್ವಂತ ಕಟ್ಟಡವಿಲ್ಲ: ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿಗೆ ಸ್ವಂತ ಕಟ್ಟಡ ಹಾಗೂ ಕಾಯಂ ಸಿಬ್ಬಂದಿ ಇಲ್ಲ. ನೂತನ ಕಟ್ಟಡ ಮಂಜೂರಾಗದ ಕಾರಣ, ಸದ್ಯ ಸರ್ಕಾರಿ ಹಳೆಯ ಚಾವಡಿಯಲ್ಲಿಯೇ ಪಂಚಾಯಿತಿ ಕಚೇರಿ ಕಾರ್ಯನಿರ್ವಹಿಸುತ್ತಿದೆ.

‘ಗ್ರಾಮದಲ್ಲಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದ್ದು, ಅದರ 15 ಗುಂಟೆ ನಿವೇಶನ ಖಾಲಿ ಇದೆ. ಈ ನಿವೇಶನವನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಆದರೆ, ಅನುಮೋದನೆ ಸಿಕ್ಕಿಲ್ಲ’ ಎಂದು ಅಧಿಕಾರಿಗಳು ಹೇಳಿದರು.

ಗ್ರಾಮದಲ್ಲಿರುವ ಬಸ್ ತಂಗುದಾಣ ಸಂಪೂರ್ಣ ಶಿಥಿಲಗೊಂಡಿದೆ. ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರು ಪ್ರತಿನಿತ್ಯ ವಿವಿಧ ಕೆಲಸಗಳಿಗಾಗಿ ಇಲ್ಲಿಂದ ಹುಬ್ಬಳ್ಳಿ, ಕುಂದಗೋಳ ಹಾಗೂ ಲಕ್ಷ್ಮೇಶ್ವರಕ್ಕೆ ತೆರಳುತ್ತಾರೆ. ತಂಗುದಾಣವು ಸೂಕ್ತ ನಿರ್ವಹಣೆ ಇಲ್ಲದೆ ಹಾಳಾಗಿರುವುದರಿಂದ ಪ್ರಯಾಣಿಕರು ರಸ್ತೆ ಬದಿ ನಿಂತು ಬಸ್‌ಗಳಿಗಾಗಿ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ.

‘ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಹೊಸ ಬಸ್ ತಂಗುದಾಣ ನಿರ್ಮಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು’ ಎಂಬುದು ಗ್ರಾಮಸ್ಥರ ಒತ್ತಾಯ.

‘ಬಸ್ ತಂಗುದಾಣದ ಅವ್ಯವಸ್ಥೆ ಕುರಿತು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ್ ಕುಮಾರ್ ಗುಡಿಮನಿ ಹೇಳಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ