ಬೆಳೆ ಹಾನಿ: ಸಂಕಷ್ಟದಲ್ಲಿ ರೈತ ಸಮುದಾಯ

ಬೆಳೆ ಹಾನಿ: ಸಂಕಷ್ಟದಲ್ಲಿ ರೈತ ಸಮುದಾಯ

ಬೆಳೆ ಹಾನಿ: ಸಂಕಷ್ಟದಲ್ಲಿ ರೈತ ಸಮುದಾಯ

ನವಲಗುಂದ: ಸಕಾಲಕ್ಕೆ ಮುಂಗಾರು ಹಾಗೂ ಹಿಂಗಾರು ಮಳೆಯಾಗದ ಪರಿಣಾಮ ರೈತ ಸಮುದಾಯ ಮತ್ತಷ್ಟು ಸಂಕಷ್ಟಕ್ಕೀಡಾಗಿದೆ.

ಸರ್ಕಾರವೂ ತಾಲ್ಲೂಕನ್ನು ತೀವ್ರ ಬರಗಾಲ ಪ್ರದೇಶವೆಂದು ಘೋಷಣೆ ಮಾಡಿದ್ದರೂ ಈವರೆಗೂ ರೈತರಿಗೆ ಪರಿಹಾರ ದೊರೆತಿಲ್ಲ, ಬರಗಾಲ ಕಾಮಗಾರಿಗಳೂ ಆರಂಭವಾಗಿಲ್ಲ.

ಹಿಂಗಾರು ಹಂಗಾಮಿನಲ್ಲಿ ಕೆಲವೆಡೆ ಸುರಿದ ಮಳೆಯಿಂದಾಗಿ ಕೆಲವೊಂದು ಗ್ರಾಮಗಳಲ್ಲಿ ರೈತರು ಬಿತ್ತನೆ ಮಾಡಿದ್ದಾರೆ. ಆದರೆ, ನಂತರ ತಾಲ್ಲೂಕಿನಾದ್ಯಂತ ಮಳೆ ಕೊರತೆಯಿಂದ ರೈತ ಸಮುದಾಯ ಮತ್ತಷ್ಟು ತೊಂದರೆ ಅನುಭವಿಸುವಂತಾಗಿದೆ.

ಹಿಂಗಾರು ಹಂಗಾಮಿನಲ್ಲಿ ತಾಲ್ಲೂಕಿನಾದ್ಯಂತ 56,821 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. ಆದರಲ್ಲಿ ಜೋಳ 5,840 ಹೆಕ್ಟೇರ್‌ ಬಿತ್ತನೆಯಾಗಬೇಕಿತ್ತು. ಅದರಲ್ಲಿ 1150 ಹೆಕ್ಟೇರ್‌ ಮಾತ್ರ ಬಿತ್ತನೆಯಾಗಿದೆ.

38,800 ಹೆಕ್ಟೇರ್‌ ಬಿತ್ತನೆ ಗುರಿ ಹೊಂದಿದ್ದ ಕಡಲೆ ಬೆಳೆ 16,580 ಹೆಕ್ಟೇರ್‌ ಮಾತ್ರ ಬಿತ್ತನೆಯಾಗಿದೆ. ಗೋದಿ 7,450 ಹೆಕ್ಟೇರ್‌ ಗುರಿಯಾಗಿದ್ದು ಬಿತ್ತನೆ ಶೂನ್ಯವಾಗಿದೆ. ಸೂರ್ಯಕಾಂತಿ 3,425 ಹೆಕ್ಟೇರ್‌ ಬಿತ್ತನೆಯಾಗಬೇಕಿತ್ತು. ಮಳೆ ಕೊರತೆಯಿಂದ ಬಿತ್ತನೆ ಪ್ರಮಾಣ ಶೂನ್ಯವಾಗಿದೆ.

ಕುಸುಬಿ 545ರಲ್ಲಿ ಕೇವಲ 150 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದ್ದು ಮಳೆ ಕೊರತೆಯೇ ಇದಕ್ಕೆ ಕಾರಣ. ಹಿಂಗಾರು ಹಂಗಾಮಿನಲ್ಲಿ ಕೇವಲ ಶೇ 31.47ರಷ್ಟು ಮಾತ್ರ ಬಿತ್ತನೆಯಾಗಿದೆ.

ಕುಡಿಯುವ ನೀರಿಗೂ ಸಮಸ್ಯೆ

ಹಿಂಗಾರು ಹಾಗೂ ಮುಂಗಾರು ಹಂಗಾಮಿನಲ್ಲಾದ ಮಳೆ ಕೊರತೆಯಿಂದ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ತೀವ್ರವಾಗಿದೆ. ಎರಡು ತಿಂಗಳ ಹಿಂದೆ ಮಲಪ್ರಭಾ ಕಾಲುವೆಯಿಂದ ಗ್ರಾಮೀಣ ಪ್ರದೇಶಗಳ ಕೆರೆಗಳಿಗೆ ನೀರನ್ನು ತುಂಬಿಸಲಾಗಿತ್ತು. ಪ್ರಸ್ತುತ ಬಹುತೇಕ ಕೆರೆಗಳಲ್ಲಿ ನೀರಿನ ಕೊರತೆ ಕಂಡು ಬಂದಿದ್ದು ಮತ್ತೊಮ್ಮೆ ಮಲಪ್ರಭಾ ಕಾಲುವೆಯಿಂದ ಕುಡಿಯುವ ನೀರಿಗಾಗಿ ನೀರು ಹರಿಸುವಂತೆ ಒತ್ತಡಗಳು ಕೇಳಿ ಬರುತ್ತಿವೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ